ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಸಂವಿಧಾನದ ಆಶಯಗಳಿಗನುಗುಣವಾಗಿ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು.
ಗದಗ: ಪ್ರಜಾಪ್ರಭುತ್ವದ ವ್ಯವಸ್ಥೆ ಭದ್ರವಾಗಿಸಲು ಎಲ್ಲರೂ ದೇಶದ ಸಂವಿಧಾನ ಓದಿ ಅರ್ಥ ಮಾಡಿಕೊಳ್ಳಬೇಕು. ಜಗತ್ತಿನಲ್ಲೇ ಭಾರತದ ಸಂವಿಧಾನ ಶ್ರೇಷ್ಠವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಡೆದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಸಂವಿಧಾನದ ಆಶಯಗಳಿಗನುಗುಣವಾಗಿ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು. ಭಾರತೀಯ ನಾಗರಿಕರ ರಕ್ಷಣೆಯನ್ನು ಸಂವಿಧಾನ ಮಾಡುತ್ತಿದೆ. ಅದರಂತೆ ನಾವು ಸಹ ಮುಂದಿನ ಪೀಳಿಗೆಗೆ ಸಂವಿಧಾನದ ಆಶಯ, ಮಹತ್ವವನ್ನು ಸಾರುವ ಮೂಲಕ ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದರು.ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ಅರಿತರೆ ಎಲ್ಲರೂ ಸಂವಿಧಾನವನ್ನು ಗೌರವದಿಂದ ಕಾಣುತ್ತಾರೆ. ದೇಶದ ಸಂವಿಧಾನ ಅತ್ಯಂತ ಪ್ರಬುದ್ಧವಾಗಿದೆ. ಸಂವಿಧಾನ ಆಶಯಕ್ಕೆ ಅನುಗುಣವಾಗಿ ನಾವೆಲ್ಲರೂ ಮುನ್ನಡೆಯೋಣ ಎಂದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರು ನೆರೆದಿದ್ದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿದರು. ಹುಲಕೋಟಿ ಜಿಸಿಟಿಎಂ ಪಪೂ ಕಾಲೇಜಿನ ಪ್ರಾ. ಡಾ. ಅರ್ಜುನ ಗೊಳಸಂಗಿ ಅವರು ಉಪನ್ಯಾಸ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಡಿವೈಎಸ್ಪಿ ವಿದ್ಯಾನಂದ ನಾಯ್ಕ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಾ. ಬಸವರಾಜ ಬಳ್ಳಾರಿ, ಡಾ. ಎಸ್.ಎಸ್. ನೀಲಗುಂದ, ಆರ್.ಎಸ್. ಬುರಡಿ, ರಾಜಾರಾಮ ಪವಾರ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ ನಿರ್ವಹಿಸಿದರು.ಅದ್ಧೂರಿ ಮೆರವಣಿಗೆ....ಸಂವಿಧಾನ ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಯ ವತಿಯಿಂದ ನಗರಸಭೆ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಕುರಿತಾಗಿ ನಾಮಫಲಕಗಳನ್ನು ಪ್ರದರ್ಶಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.ಮೆರವಣಿಗೆಗೆ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದರು. ಈ ವೇಳೆ ಕೃಷ್ಣಗೌಡ ಪಾಟೀಲ, ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೆಮನಿ, ಮುರ್ತುಜಾ ಖಾದ್ರಿ, ನಂದಾ ಹಣಬರಟ್ಟಿ, ಡಾ. ಬಸವರಾಜ ಬಳ್ಳಾರಿ, ಗಂಗಪ್ಪ ಎಂ. ಇದ್ದರು.