ಪ್ರಜಾಪ್ರಭುತ್ವದ ಜೀವಂತಿಕೆಗೆ ಸಂವಿಧಾನ ಅಗತ್ಯ: ಶಾಸಕ ಎಂ.ವೈ.ಪಾಟೀಲ್

| Published : Jan 27 2024, 01:20 AM IST

ಸಾರಾಂಶ

ಅಫಜಲ್ಪುರ ಪಟ್ಟಣದ ತಹಸೀಲ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಬಳಿಕ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಸಮಾರಂಭದಲ್ಲಿ ಶಾಸಕ ಎಂ.ವೈ ಪಾಟೀಲ್‌ ಭಾಗಿಯಾಗಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚವಡಾಪುರಜಗತ್ತಿನ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ಹೊಂದಿರುವ ದೇಶ ನಮ್ಮದು, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಜೀವಂತವಾಗಿರುವುದೇ ಸಂವಿಧಾನವೆಂಬ ಜೀವಂತ ಗ್ರಂಥದಿಂದ ಎಂದು ಶಾಸಕ ಎಂ.ವೈ ಪಾಟೀಲ್ ಅಭಿಪ್ರಾಯ ಪಟ್ಟರು.

ಅಫಜಲ್ಪುರ ಪಟ್ಟಣದ ತಹಸೀಲ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಬಳಿಕ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ ಸಂವಿಧಾನ ಅನೇಕ ಬಾರಿ ತಿದ್ದುಪಡಿಯಾಗಿದೆ. ಆದರೆ ಬದಲಾವಣೆಯಾಗಿಲ್ಲ. ಈ ಸಂವಿಧಾನವನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹಕ್ಕುಗಳು ಕೇಳಿ ಪಡೆದಂತೆ ನಮ್ಮ ಕರ್ತವ್ಯಗಳನ್ನು ಕೂಡ ಮರೆಯದಂತೆ ಮಾಡುವ ಮೂಲಕ ದೇಶಕ್ಕೆ ಒಳ್ಳೆಯ ಪ್ರಜೆಗಳಾಗೋಣ ಎಂದು ಸಲಹೆ ನೀಡಿದರು.

ಪ್ರೊಬೆಷನರಿ ಐಎಎಸ್‌ ಅಧಿಕಾರಿ ತಾಪಂ ಇಒ ಗಜಾನನ ಬಾಳೆ, ತಹಸೀಲ್ದಾರ ಸಂಜೀವಕುಮಾರ ದಾಸರ್ ಮಾತನಾಡಿ, ನಮಗೆಲ್ಲರಿಗೂ ಭಾರತೀಯರೆನ್ನುವ ಗರ್ವ, ಅಭಿಮಾನ ಹೆಚ್ಚುವಂತೆ ಮಾಡಿದ್ದು ಭಾರತೀಯ ಸಂವಿಧಾನ ಹೀಗಾಗಿ ಸಂವಿಧಾನದ ಆಶಯಕ್ಕೆ ತಕ್ಕಂತೆ ನಾವೆಲ್ಲರೂ ಬದುಕು ಸಾಗಿಸಬೇಕೆಂದು ಹೇಳಿದರು.

ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ವಿಜಯಮಹಾಂತೇಶ ಹೂಗಾರ, ಬಾಬುರಾವ್ ಜ್ಯೋತಿ, ಶಾಂತಪ್ಪ ಜಾಧವ, ಶರಣಬಸಪ್ಪ ಹೊಸಮನಿ, ಹಾಜಿಮಲಂಗ, ಬಾಸು ಚವ್ಹಾಣ, ಮಡಿವಾಳಪ್ಪ ಬಾಗೋಡಿ, ಲಕ್ಷ್ಮೀಕಾಂತ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥೀಗಳು, ಸರ್ಕಾರಿ ಇಲಾಖೆ ಅಧಿಕಾರಿಗಳು, ಪಟ್ಟಣದ ನಾಗರಿಕರು ಇದ್ದರು.