ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ: ಎ.ಎಸ್.ರಾಜೇಶ್

| Published : May 16 2025, 01:56 AM IST

ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ: ಎ.ಎಸ್.ರಾಜೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ. ಎಲ್ಲಿಯವರೆಗೆ ಸಂವಿಧಾನ ನಮ್ಮ ರಾಷ್ಟ್ರೀಯ ಧರ್ಮಗ್ರಂಥವಾಗಿರುತ್ತದೆಯೋ ಅಲ್ಲಿಯವರೆಗೂ ಭಾರತೀಯ ಒಕ್ಕೂಟ ಬಲಿಷ್ಠವಾಗಿರುತ್ತದೆ. ನಮ್ಮ ಸಂವಿಧಾನದ ಮೌಲ್ಯಗಳು ಇಂದಿನ ಜಗತ್ತಿನಲ್ಲಿಯೂ ಅತ್ಯಂತ ಪ್ರಸ್ತುತ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಭಾರತೀಯರಿಗೆ ಸಂವಿಧಾನವೇ ಧರ್ಮಗ್ರಂಥ. ಎಲ್ಲಿಯವರೆಗೆ ಸಂವಿಧಾನ ನಮ್ಮ ರಾಷ್ಟ್ರೀಯ ಧರ್ಮ ಗ್ರಂಥವಾಗಿರುತ್ತದೆಯೋ ಅಲ್ಲಿಯವರೆಗೂ ಭಾರತೀಯ ಒಕ್ಕೂಟ ಬಲಿಷ್ಠವಾಗಿರುತ್ತದೆ ಎಂದು ಸಾಲಿಗ್ರಾಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎ.ಎಸ್.ರಾಜೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಸಮಿತಿಯಿಂದ ಆಯೋಜಿಸಿದ್ದ ಸಾಂವಿಧಾನಿಕ ಮೌಲ್ಯಗಳು ಮತ್ತು ಭಾರತ ಸಂವಿಧಾನ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನಮ್ಮ ಸಂವಿಧಾನದ ಮೌಲ್ಯಗಳು ಇಂದಿನ ಜಗತ್ತಿನಲ್ಲಿಯೂ ಅತ್ಯಂತ ಪ್ರಸ್ತುತ. ಅವು ಕೇವಲ ಆದರ್ಶಗಳಲ್ಲ, ಬದಲಾಗಿ ನಮ್ಮ ಸಮಾಜವನ್ನು ಉತ್ತಮಗೊಳಿಸಲು ಮತ್ತು ರಾಷ್ಟ್ರವನ್ನು ಬಲಪಡಿಸಲು ನಮಗೆ ಲಭ್ಯವಿರುವ ಪ್ರಬಲ ಸಾಧನಗಳಾಗಿವೆ ಎಂದರು.

ಪ್ರತಿಯೊಬ್ಬರು ಈ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವುದು, ಗೌರವಿಸುವುದು ಮತ್ತು ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎ.ವಿ.ದಿನೇಶ್ ಮಾತನಾಡಿ, ವಿಭಿನ್ನ ಭಾಷಗಳು, ಧರ್ಮಗಳು ಮತ್ತು ಸಂಸ್ಕೃತಿಗಳನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ಎಲ್ಲರನ್ನು ಒಗ್ಗೂಡಿಸುವ ಒಂದು ಪ್ರಮುಖ ಕೊಂಡಿಯಾಗಿದೆ ಎಂದರು.

ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕೃಷ್ಣಮೂರ್ತಿ ಮಾತನಾಡಿ, ನಾವು ಸಂವಿಧಾನದ ಆದರ್ಶ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವ ಜೊತೆಗೆ ನಮ್ಮ ರಾಷ್ಟ್ರವನ್ನು ಮತ್ತಷ್ಟು ಬಲಪಡಿಸಲು ಸಂಕಲ್ಪ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಜಿ.ಮಧು, ಸಿ.ಬಿ.ಚೇತನ್ ಕುಮಾರ್, ಚೂಡಲಿಂಗಯ್ಯ, ಮಹದೇವ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.