ದೇಶಕ್ಕೆ ಸಂವಿಧಾನವೇ ಪವಿತ್ರ ಗ್ರಂಥ

| Published : Feb 07 2024, 01:46 AM IST

ಸಾರಾಂಶ

ಕೆಲ ರಾಜಕಾರಣಿಗಳು ಸಂವಿಧಾನವನ್ನು ಬದಲಿಸುವಂತಹ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ಯಾರೂ ಸಂವಿಧಾನ ಬದಲಿಸಲು ಸಾಧ್ಯವೇ ಇಲ್ಲ. ಸಂವಿಧಾನ ಬದಲಿಸಲು ಹೊರಟರೇ ಸುಟ್ಟುಹೋಗುತ್ತಾರೆ

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಶಾಸಕ ಸುಬ್ಬಾರೆಡ್ಡಿ ಅಭಿಮತ

ಗುಡಿಬಂಡೆ: ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸಲು ಸಂವಿಧಾನದ ಮೂಲಕ ಅವಕಾಶ ಕಲ್ಪಿಸಿಕೊಟ್ಟಂತಹ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ದೇಶಕ್ಕೆ ಸಂವಿಧಾನವೇ ಪವಿತ್ರ ಗ್ರಂಥ ಎಂದು ಶಾಸಕ ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಗುಡಿಬಂಡೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧ ಚಿತ್ರ ಮೆರವಣಿಗೆ ನಡೆಸಿ ನಂತರ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂವಿಧಾನ ಬದಲಿಸಲು ಸಾಧ್ಯವಿಲ್ಲ

ಕೆಲ ರಾಜಕಾರಣಿಗಳು ಸಂವಿಧಾನವನ್ನು ಬದಲಿಸುವಂತಹ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ಯಾರೂ ಸಂವಿಧಾನ ಬದಲಿಸಲು ಸಾಧ್ಯವೇ ಇಲ್ಲ. ಸಂವಿಧಾನ ಬದಲಿಸಲು ಹೊರಟರೇ ಸುಟ್ಟುಹೋಗುತ್ತೀರಾ. ನಮ್ಮ ಸರ್ಕಾರ ಬಡವರ, ಜನಸಾಮಾನ್ಯರ ಪರ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದಂತಹ ಎಲ್ಲಾ ಗ್ಯಾರಂಟಿಗಳನ್ನು ಮುಂದಿನ ಐದು ವರ್ಷಗಳ ಕಾಲ ಮುಂದುವರೆಸುತ್ತೇವೆ ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮುಖ್ಯ ಬೀದಿಯಲ್ಲಿ ತಮಟೆ ಕಲಾವಿದರು, ವಿವಿಧ ಕಲಾ ತಂಡಗಳು, ವಾದ್ಯಗಳೊಂದಿಗೆ ಅಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಪಟ್ಟಣದ ಮುಖಂಡರು ಹಾಗೂ ಸಾರ್ವಜನಿಕರು ಸ್ವಾಗತಿಸಿ, ಮೆರವಣಿಗೆ ನಡೆಸಿದರು. .

ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ತೇಜಾನಂದರೆಡ್ಡಿ, ನೋಡಲ್ ಅಧಿಕಾರಿ ಇಡ್ರಹಳ್ಳಿ ಪಾಂಡುರಂಗ, ತಹಸೀಲ್ದಾರ್ ಎನ್. ಮನಿಷಾ, ತಾಪಂ ಇಒ ಹೇಮಾವತಿ, ಆರಕ್ಷಕ ವೃತ್ತ ನಿರೀಕ್ಷಕರಾದ ನಯಾಜ್, ಪ.ಪಂ. ಅಧ್ಯಕ್ಷೆ ನಗೀನ್, ಸಿಒ ಸಬಾ ಶಿರಿನ್, ಬಿಇಒ ಮುನೇಗೌಡ, ತಾ.ಕಸಾಪ ಅಧ್ಯಕ್ಷ ಸುಬ್ಬರಾಯಪ್ಪ, ಮತ್ತಿತರರು ಇದ್ದರು.