ಸಾರಾಂಶ
ಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ.
ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಶಿಗ್ಗಾಂವಿಭಾರತ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ. ಅದಕ್ಕೆ ನಾವೆಲ್ಲರೂ ಗೌರವ ನೀಡಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಶೈಲಶ್ರೀ ಹೇಳಿದರು.
ತಾಲೂಕಿನ ಕುನ್ನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.ಎಲ್ಲರಿಗೂ ಸಮಾನತೆ, ಸ್ವಾತಂತ್ರ‍್ಯದ ಹಕ್ಕನ್ನು ನೀಡಿರುವ ಸಂವಿಧಾನ ಸುಲಭವಾಗಿ ರಚನೆಯಾಗಿಲ್ಲ. ಕರಡು ಸಮಿತಿ ಅಧ್ಯಕ್ಷರಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಅತ್ಯಂತ ವ್ಯವಸ್ಥಿತವಾಗಿ ದೇಶದ ನಾಗರಿಕರೆಲ್ಲರಿಗೂ ಸಮಾನತೆ ಕಟ್ಟಿಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಮಂಜುಳಾ ಉಪ್ಪಾರ ವಹಿಸಿದ್ದರು.ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು, ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸಂವಿಧಾನ ಜಾಗೃತಿ ಕುರಿತಾಗಿ ವಿಡಿಯೋ ಮೂಲಕ ಪ್ರಾತ್ಯಕ್ಷಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಕಾಂತವ್ವ ಮೊರಬದ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ, ಗ್ರಾಪಂ ಸದಸ್ಯರಾದ ಡಿ.ಆರ್. ಬೊಮ್ಮನಳ್ಳಿ, ಬಸನಗೌಡ ಬ್ಯಾಹಟ್ಟಿ, ಲಕ್ಷ್ಮಣ ಬೆಂಡಲಗಟ್ಟಿ, ಮಲ್ಲವ್ವ ಮಮದಾಪುರ, ಗಂಗಮ್ಮ ಲಮಾಣಿ, ಮಹಾದೇವಕ್ಕ ಬಡಿಗೇರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಸ್. ಪಾವಿನ, ಮುಖಂಡರಾದ ಬಾಬುಸಾಬ ಜಿಗಳೂರ, ಫಕ್ಕೀರಗೌಡ ಪಾಟೀಲ, ಶೋಭಾ ಹಿರೇಮಠ, ಸವಿತಾ ದೊಡ್ಡಮನಿ, ಶೋಭಾ ಸೊಗಲಿ ಸೇರಿದಂತೆ ಗ್ರಾಮದ ವಿವಿಧ ಸಂಘಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.ಗ್ರಾಪಂ ಸದಸ್ಯ ಲಕ್ಷ್ಮಣ ಬೆಂಡಲಗಟ್ಟಿ ಸ್ವಾಗತಿಸಿದರು. ದೇವರಾಜ ಲಮಾಣಿ ನಿರೂಪಿಸಿದರು.