ಶಾಲೆಗೆ ಸಂವಿಧಾನ ಪೀಠಿಕೆ ಭಾವಚಿತ್ರ ಕೊಡುಗೆ

| Published : Apr 15 2025, 01:05 AM IST

ಸಾರಾಂಶ

ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಪೀಠಿಕೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಕಟ್ಟ ಕಡೆಯ ವ್ಯಕ್ತಿಗೂ ಜಾತಿ, ಮತ ಭೇದವಿಲ್ಲದೆ ಸಮಾನತೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ತಾವು ರಚಿಸಿರುವ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಇಂದು ದೇಶ ವಿಶ್ವಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದು ಬಣ್ಣಿಸಿದರು.

ಬಾಗೂರು: ಹೋಬಳಿಯ ನವಿಲೆ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ ಆರ್‌. ಅಂಬೇಡ್ಕರ್ 134ನೇ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಸವರಾಜ್‌, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಪೀಠಿಕೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಕಟ್ಟ ಕಡೆಯ ವ್ಯಕ್ತಿಗೂ ಜಾತಿ, ಮತ ಭೇದವಿಲ್ಲದೆ ಸಮಾನತೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ತಾವು ರಚಿಸಿರುವ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಇಂದು ದೇಶ ವಿಶ್ವಮಟ್ಟದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದು ಬಣ್ಣಿಸಿದರು.

ಡಾ.ಅಂಬೇಡ್ಕರ್ ಜಯಂತ್ಯುತ್ಸವದ ಸವಿನೆನಪಿಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಸವರಾಜ್, ಸಂವಿಧಾನ ಪೀಠಿಕೆಯ ಫೋಟೋವನ್ನು ನವಿಲೆ ಗ್ರಾಮದ ಸರ್ಕಾರಿ ಹಿರಿಯ ಹಾಗೂ ಪ್ರೌಢಶಾಲೆ ಮತ್ತು ನವಿಲೆ ಗೇಟ್‌ನ ಸರ್ಕಾರಿ ಪಾಠಶಾಲೆಗೆ ಕೊಡುಗೆಯಾಗಿ ಇದೇ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ್, ಉಪಾಧ್ಯಕ್ಷ ರಾಮಣ್ಣ, ಸದಸ್ಯರಾದ ಅದಿಹಳ್ಳಿ ರಂಗೇಗೌಡರು, ಪ್ರೇಮಲತಾ ದಿನೇಶ್, ಸುಜಾತಾ ಬಸವರಾಜ್, ಡಿಎಸ್ಎಸ್ ಮುಖಂಡ ನವಿಲೆ ಹೊಸೂರು ಬಸವರಾಜ್, ಕಾರ್ಯದರ್ಶಿ ಮಲ್ಲೇಶ್, ಬಿಲ್ ಕಲೆಕ್ಟರ್ ರವೀಶ್ ಸೇರಿದಂತೆ ಇತರರು ಹಾಜರಿದ್ದರು.