ಸಾರಾಂಶ
ಕನ್ನಡಪ್ರಭ ವಾರ್ತೆ ಮಾಲೂರು
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿ ಕೊಟ್ಟಿರುವ ಸಂವಿಧಾನದಡಿ ಭಾರತವು ಪ್ರಪಂಚದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಇಲ್ಲಿನ ನಾಗರಿಕರು ತಮ್ಮ ಪ್ರತಿನಿಧಿಗಳನ್ನು ಚುನಾಯಿಸುವ ಹಕ್ಕು ಪಡೆದಿದ್ದು, ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನ ನೀಡಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.ಅವರು ನಗರದ ನಗರಸಭಾ ಉದ್ಯನವನದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.
ನಾಗರಿಕ ಹಕ್ಕುಗಳ ರಕ್ಷಣೆಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರವಾಗಿ ಮತ ಚಲಾಯಿಸುವ, ತಮ್ಮ ಹಕ್ಕುಗಳನ್ನು ಅನುಭವಿಸುವ, ಮತ್ತು ಸರ್ಕಾರದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನೀಡುತ್ತದೆ. ಇದು ಸಂವಿಧಾನಬದ್ಧ ತತ್ವಗಳ ಆಧಾರದ ಮೇಲೆ ನಿಂತಿದೆ, ಇದು ಸಾರ್ವತ್ರಿಕ ವಯಸ್ಕ ಮತದಾನ, ಸಮಾನತೆ, ಮತ್ತು ಸ್ವಾತಂತ್ರ‍್ಯವನ್ನು ಖಾತರಿಪಡಿಸುತ್ತದೆ. ಸಂವಿಧಾನವು ಸರ್ಕಾರದ ಅಧಿಕಾರವನ್ನು ಮಿತಿಗೊಳಿ ನಾಗರಿಕರ ಹಕ್ಕುಗಳನ್ನು ರಕ್ಷಿಸುತ್ತದೆ ಎಂದರು.
ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಕೊಟ್ಟಿದೆ. ಎಲ್ಲರಿಗೂ ಸಮಾನತೆ, ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ನೀಡಿದ ಅಂಬೇಡ್ಕರ್ ಅವರನ್ನು ಸ್ಮರಿಸುತ್ತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ ೧೫ರಂದು ಪ್ರತಿವರ್ಷ ಆಚರಿಸಲಾಗುತ್ತಿದೆ. ಇಲ್ಲಿನ ಉದ್ಯಾನವನವನ್ನು ಯೋಜನಾ ಪ್ರಾಧಿಕಾರದ ಮೂಲಕ ೧ ಕೋಟಿ ರು.ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದರು.ಸಂವಿಧಾನವನ್ನು ಗೌರವಿಸಬೇಕುತಹಸೀಲ್ದಾರ್ ಎಂ.ವಿ.ರೂಪ ಮಾತನಾಡಿ, ಸ್ವಾತಂತ್ರ‍್ಯಪೂರ್ವದಲ್ಲಿ ಬ್ರಿಟಿಷರ ಆಡಳಿದ ಭಾರತದಲ್ಲಿ ಯಾವುದೇ ಮೂಲಸೌಲಭ್ಯಗಳಿಲ್ಲದೇ ಜನರ ಪರಿಸ್ಥಿತಿ ಸಂಕಷ್ಟದಲ್ಲಿತ್ತು. ಸ್ವಾತಂತ್ರ‍್ಯ ನಂತರದ ಭಾರತ ಸಾಮಾಜಿಕ, ಅರ್ಥಿಕ, ರಾಜಕೀಯ, ಸಮಾನತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಇದಕ್ಕೆ ನಮ್ಮ ಸುಭದ್ರ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನವೇ ಕಾರಣವಾಗಿದೆ. ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ನೀಡಿರುವ ಸಂವಿಧಾನವವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದರು.ಕರ‍್ಯಕ್ರಮದಲ್ಲಿ ತಾ.ಪಂ. ಇಒ ಕೃಷ್ಣಪ್ಪ, ನಗರಸಭೆ ನಗರ ಸಭೆ ಅಧ್ಯಕ್ಷೆ ವಿಜಯ ಲಕ್ಷ್ಮಿ, ಉಪಾಧ್ಯಕ್ಷೆ ವಿಜಯಲಕ್ಷ್ಮಿ, ಸದಸ್ಯರಾದ ರಾಜಪ್ಪ, ಮುರುಳಿ, ಆರ್ ವೆಂಕಟೇಶ್, ಪದ್ಮಾವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಮೂರ್ತಿ, ಪೊಲೀಸ್ ಇನ್ಸ್ಪೆಕ್ಟರ್ ವಸಂತ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಬಿ.ಇಒ ಕೆಂಪಯ್ಯ, ಆರ್‌ಡಿಪಿಆರ್ ಅಭಿಯಂತರ ರಾಜು, ದಲಿತಪರ ಸಂಘಟನೆಗಳ ಮುಂಖಡರಾದ ಎಸ್.ಎಂ.ವೆಂಕಟೇಶ್, ಸಂತೋಷ್, ನಾರಾಯಣಸ್ವಾಮಿ, ಆಂಜಿನಪ್ಪ, ಎ.ಕೆ.ವೆಂಕಟೇಶ್, ನವೀನ್, ಇನ್ನಿತರರು ಹಾಜರಿದ್ದರು.