ಸಂವಿಧಾನ ಬದ್ಧವಾಗಿ ನಡೆಯಬೇಕು: ಯೋಗೇಶ್ವರ್

| Published : Jan 27 2025, 12:49 AM IST

ಸಾರಾಂಶ

ಚನ್ನಪಟ್ಟಣ: ರಾಷ್ಟ್ರೀಯ ಹಬ್ಬಗಳು ಜನರನ್ನು ಭಾವೈಕ್ಯವಾಗಿ ಒಂದುಗೂಡಿಲಿದ್ದು, ರಾಷ್ಟ್ರೀಯ ಹಬ್ಬಗಳಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಂವಿಧಾನಕ್ಕೆ ಬದ್ಧರಾಗಿ ಗೌರವಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಚನ್ನಪಟ್ಟಣ: ರಾಷ್ಟ್ರೀಯ ಹಬ್ಬಗಳು ಜನರನ್ನು ಭಾವೈಕ್ಯವಾಗಿ ಒಂದುಗೂಡಿಲಿದ್ದು, ರಾಷ್ಟ್ರೀಯ ಹಬ್ಬಗಳಲ್ಲಿ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಸಂವಿಧಾನಕ್ಕೆ ಬದ್ಧರಾಗಿ ಗೌರವಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಬಲಿಷ್ಠವಾಗಿ ಬೆಳೆದಿರುವುದಕ್ಕೆ ಸಂವಿಧಾನವೇ ಕಾರಣ. ದೇಶಕ್ಕೆ ಸ್ವಾತಂತ್ರ್ಯ ದೊರಕಲು ಹಲ ಮಹನೀಯರು ತ್ಯಾಗ, ಬಲಿದಾನವನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸಮರ ಕಲೆಗಳ ತಜ್ಞ ಹಾಸನ ರಘು ಅವರು ಭಾರತೀಯ ಪುರಾತತ್ವ ಕಲೆ ಉಳಿಸಲು ಶ್ರಮಿಸುತ್ತಿದ್ದು, ಅದನ್ನು ಗುರುತಿಸಿ ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಗೌರವ ನೀಡಿದೆ. ಇಂದು ಅವರು ನಮ್ಮೊಟ್ಟಿಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರ ಎಂದರು. ತಹಸೀಲ್ದಾರ್ ನರಸಿಂಹಮೂರ್ತಿ ಮಾತನಾಡಿ, ನಾವಿಂದು ೭೬ನೇ ಗಣರಾಜೋತ್ಸವದ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಬರಲು ಹಾಗೂ ಸಂವಿಧಾನ ರಚನೆಯಾಗಲು ಸಾಕಷ್ಟು ಮಹನೀಯರು ಶ್ರಮಿಸಿದ್ದಾರೆ. ದೇಶದ ಹಿತಕ್ಕಾಗಿ ಅವರು ಏನೆಲ್ಲಾ ಮಾಡಿದ್ದಾರೆಂದು ಸ್ಮರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವಾಸಿಲ್ ಆಲಿಖಾನ್, ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ರಂಗನಾಥ್, ಡಿವೈಎಸ್‌ಪಿ ಕೆ.ಸಿ.ಗಿರಿ, ಬಿಇಒ ರಾಮಲಿಂಗಯ್ಯ, ಇಒ ಸಂದೀಪ್, ಗ್ರಾಮಾಂತರ ವೃತ್ತ ನಿರೀಕ್ಷಕ ಕೃಷ್ಣ, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಇತರರಿದ್ದರು.

ಬಾಕ್ಸ್..............

ಮಕ್ಕಳ ಮಲ್ಲಗಂಭ ಪ್ರದರ್ಶನ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಕಾರ್ಯಕ್ರಮದಲ್ಲಿ ಮಕ್ಕಳ ಮಲ್ಲಗಂಭ ಪ್ರದರ್ಶನ ಆಯೋಜಿಸಿದ್ದು, ಅದರಲ್ಲಿ ಪದ್ಮಶ್ರೀ ಪುರಸ್ಕೃತ ಹಾಸನ ರಘು ನೇತೃತ್ವದ ಕರ್ನಾಟಕ ಸಾಹಸ ಕಲಾ ಅಕಾಡಮಿ ಮಕ್ಕಳು ಮಲ್ಲಗಂಭ ಪ್ರದರ್ಶನ ನೀಡಿದರು.

ನಾಲ್ಕು ವರ್ಷದ ಪುಟಾಣಿಯಿಂದ ಹಿಡಿದು ೧೪ ವರ್ಷದ ವಿದ್ಯಾರ್ಥಿಗಳು ನಡೆಸಿಕೊಟ್ಟ ಮಲ್ಲಗಂಭ ಪ್ರದರ್ಶನ ನೋಡುಗರ ಮನಸೂರೆಗೊಂಡಿತ್ತು. ಮಲ್ಲಗಂಭ ಪ್ರದರ್ಶನವನ್ನು ವೀಕ್ಷಿಸಿದ ಶಾಸಕ ಯೋಗೇಶ್ವರ್ ಹಾಗೂ ವೇದಿಕೆಯಲ್ಲಿದ್ದ ಅತಿಥಿಗಳು ವೇದಿಕೆಯಿಂದ ಇಳಿದು ಬಂದು ಮಕ್ಕಳೊಂದಿಗೆ ಪೋಟೋ ತೆಗೆಸಿಕೊಂಡು ಮಕ್ಕಳ ಬೆನ್ನುತಟ್ಟಿ ಪ್ರೋತ್ಸಾಹಿಸಿದರು.

ಬಾಕ್ಸ್................

ಪದ್ಮಶ್ರೀ ಪುರಸ್ಕೃತ ಹಾಸನ ರಘುಗೆ ಸನ್ಮಾನ

ಚನ್ನಪಟ್ಟಣದಲ್ಲಿ ನಡೆದ ೭೬ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಹಾಸನ ರಘು ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಹಾಸನ ರಘು ತಾಲೂಕಿನಲ್ಲಿ ಸಾಹಸ ಕಲೆ ತರಬೇತಿ ನಡೆಸಲು ಸ್ಥಳಾವಕಾಶ ಮಾಡಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಯೋಗೇಶ್ವರ್ ಶಿಕ್ಷಣಾಧಿಕಾರಿಗಳ ಜೊತೆ ಮಾತನಾಡಿ ನಗರದ ಜಿಕೆಪಿಎಂಎಸ್ ಶಾಲೆಯಲ್ಲಿ ಅವಕಾಶ ಕಲ್ಪಿಸುವಂತೆ ಸೂಚಿಸಿದರು.

ಪೋಟೊ೨೬ಸಿಪಿಟಿ೧:

ಚನ್ನಪಟ್ಟಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಸಿ.ಪಿ.ಯೋಗೇಶ್ವರ್ ಉದ್ಘಾಟಿಸಿದರು.

ಪೋಟೊ೨೬ಸಿಪಿಟಿ೨:

ಚನ್ನಪಟ್ಟಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಲ್ಲಗಂಭ ಪ್ರದರ್ಶನ ನೀಡಿದ ಮಕ್ಕಳೊಂದಿಗೆ ಶಾಸಕ ಯೋಗೇಶ್ವರ್ ಹಾಗೂ ಅತಿಥಿಗಳು.