ಪ್ರಪಂಚವೇ ಬಾಬಾ ಸಾಹೇಬರು ಬರೆದ ಸಂವಿಧಾನವನ್ನು ಒಪ್ಪಿದೆ. ಮಹಾತ್ಮ ಗಾಂಧಿಜೀ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಾವು ಗೌರವಸುತ್ತೇವೆ. ಸಂವಿಧಾನ ಇಲ್ಲದಿದ್ದರೆ ನಾವು ಸಾಕಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಬರುತ್ತಿತ್ತು. ಶಿಕ್ಷಣದಿಂದ ಉತ್ತಮ ಸಂವಿಧಾನ ದೊರೆಯಿತು.
ಕನ್ನಡಪ್ರಭ ವಾರ್ತೆ ಮಂಡ್ಯ
ಉತ್ತಮ ಶಿಕ್ಷಣ ಪಡೆದು ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಭದ್ರತೆ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿಬೃಹತ್ ಲಿಖಿತ ಸಂವಿಧಾನ ನೀಡಿದ್ದಾರೆ. ವಿಶ್ವವೇ ಭಾರತ ಸಂವಿಧಾನವನ್ನು ಒಪ್ಪಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಪ್ರಪಂಚವೇ ಬಾಬಾ ಸಾಹೇಬರು ಬರೆದ ಸಂವಿಧಾನವನ್ನು ಒಪ್ಪಿದೆ. ಮಹಾತ್ಮ ಗಾಂಧಿಜೀ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಾವು ಗೌರವಸುತ್ತೇವೆ. ಸಂವಿಧಾನ ಇಲ್ಲದಿದ್ದರೆ ನಾವು ಸಾಕಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಬರುತ್ತಿತ್ತು. ಶಿಕ್ಷಣದಿಂದ ಉತ್ತಮ ಸಂವಿಧಾನ ದೊರೆಯಿತು ಎಂದರು.
ಶಿಕ್ಷಣ ಒಂದು ಶಕ್ತಿಯಾಗಿದ್ದು ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ. ಶಿಕ್ಷಣ ಎಂಬುದು ಉದ್ಯೋಗಕ್ಕೆ ಮಾತ್ರ ಸೀಮಿತವಾಗದೆ ದೇಶದ ಇತಿಹಾಸ ತಿಳಿದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಪಡೆದುಕೊಳ್ಳಬೇಕು. ಶಿಕ್ಷಣದಿಂದ ಮಾತ್ರ ಸಮಾಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.ಸಂವಿಧಾನವು ಎಲ್ಲಾ ವರ್ಗಗಳಿಗೂ ಸಮಾನತೆ ಹಾಗೂ ಸ್ವಾತಂತ್ರ್ಯದ ಹಕ್ಕು ನೀಡಿದೆ. ಅದು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಿಂದ. ಹಾಗಾಗಿ ನಾವು ಬಾಬಾ ಸಾಹೇಬರಿಗೆ ನಮನ ಸಲ್ಲಿಸಬೇಕು. ಅಂಬೇಡ್ಕರ್ ತತ್ವ, ಆದರ್ಶಗಳು ನಮಗೆ ಮಾರ್ಗದರ್ಶನವಾಗಿದೆ ಎಂದರು.
ಎಲ್ಲರಿಗೂ ಶಿಕ್ಷಣ ನೀಡಲು ಸರ್ಕಾರ ಸಾಕಷ್ಟು ಕಾರ್ಯಕ್ರಮ ಮಾಡಲಾಗುತ್ತಿದೆ. ರಾಜಕೀಯ, ಸಾಮಾಜಿಕವಾಗಿ ಸಮಾನತೆಗೆ ಅವಕಾಶವಿದೆ. ಅದಕ್ಕಾಗಿ ಉತ್ತಮ ಸಮಾಜವನ್ನು ನಾವು ಕಟ್ಟಬೇಕು. ಎಸ್ ಸಿಪಿ, ಟಿಎಸ್ಪಿ ಹಣ ಮೂರು ರಾಜ್ಯದಲ್ಲಿ ಮಾತ್ರ ಬಳಕೆಯಲ್ಲಿದ್ದು, ನಮ್ಮ ಸರ್ಕಾರ ಎಲ್ಲರಿಗೂ ಸಮನ್ವಯ ನ್ಯಾಯ ನೀಡಿದೆ ಎಂದರು.ಎಲ್ಲಾ ಸಮುದಾಯಗಳು ಸ್ವಾವಲಂಬನೆಯಿಂದ ಜೀವನ ನಡೆಸುವ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆ ನೀಡಿದ್ದೇವೆ. ಇದರಿಂದ ಶೇ.70% ರಷ್ಟು ಜನರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಒಂದೇ ಎಂಬ ಮನೋಭಾವನೆ ಇಟ್ಟುಕೊಂಡು ನಾವೆಲ್ಲರೂ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಾಸಕ ಪಿ.ರವಿಕುಮಾರ್ ಮಾತನಾಡಿ. ಡಾ.ಅಂಬೇಡ್ಕರ್ ಅವರು ಬರಿ ದಲಿತರಿಗೆ ಅಲ್ಲದೆ ವಿಶ್ವಕ್ಕೆ ನೀತಿ ಹೇಳಿಕೊಟ್ಟ ಗುರು. ಇಂದು ಕೆನಡಾ, ಯುರೋಪಿನಲ್ಲಿ ಅಂಬೇಡ್ಕರ್ ಜಯಂತಿ ನಡೆಯುತ್ತಿದೆ. ದೇಶ ಮುನ್ನಡೆಸಲು ಸಾಧ್ಯವಾಗುತ್ತಿರುವುದು ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮಾತ್ರ ಎಂದರು.ದೇಶಕ್ಕೆ ಗೌರವ ಸಲ್ಲಿಸುವುದಾದರೆ ಸಂವಿಧಾನ ಪ್ರಕಾರ ನಾವು ನಡೆಯಬೇಕು. ಎಲ್ಲರೂ ಶಾಂತಿ ನೆಮ್ಮದಿಯಿಂದ ಬದುಕಬೇಕು. ಬಿ.ಆರ್.ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಹಳ್ಳಿ ಹಳ್ಳಿಗಳಿಗೆ ತಲುಪಿಸಬೇಕು. ಸಂವಿಧಾನ ಬದ್ಧವಾಗಿ ಸರ್ಕಾರ ಮುನ್ನಡೆಸಬೇಕು ಎಂದರು.
ಅಂಬೇಡ್ಕರ್ ಭವನಗಳ ಪೂರ್ಣ ಕಾಮಗಾರಿ ಸಂಪೂರ್ಣ ಗೊಳಿಸಲು ಜಿಲ್ಲೆಗೆ 2 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಮಾಡುತ್ತೇವೆ. ಅಂಬೇಡ್ಕರ್ ರವರ ತತ್ವ, ಸಿದ್ಧಾಂತಗಳು ಎಲ್ಲಾ ಮನೆಯಲ್ಲಿ ಬೆಳಗಬೇಕು ಎಂದರು.ಇದೇ ವೇಳೆ ಜಿಪಂ ಸಿಇಒ ಕೆ.ಆರ್.ನಂದಿನಿ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು. ನಂತರ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಶ್ರೀನಿವಾಸ್, ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಂಬೇಡ್ಕರ್ ಬಗ್ಗೆ ತಿಳಿಯಲು ಅವರ ಪುಸ್ತಕಗಳನ್ನು ಹೆಚ್ಚು ಓದಿ: ಡಾ.ಡಿ.ಆನಂದ್ಕನ್ನಡಪ್ರಭ ವಾರ್ತೆ ಮಂಡ್ಯಬಹುಮುಖ ವ್ಯಕ್ತಿತ್ವ ಹೊಂದಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ತಿಳಿಯಲು ಅವರ ಪುಸ್ತಕಗಳನ್ನು ಹೆಚ್ಚು ಓದಬೇಕು ಎಂದು ಮೈಸೂರು ವಿವಿ ಹಿರಿಯ ಪ್ರಾಧ್ಯಾಪಕರು (ನಿವೃತ್ತ) ಡಾ.ಡಿ.ಆನಂದ್ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ, ಕಾನೂನು ಮಂತ್ರಿಯಾಗಿ ಹಿಂದೂ ಕೋಡ್ ಬಿಲ್ (Hindu Code Bill) 1950ರ ದಶಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಮಂಡಿಸಲ್ಪಟ್ಟ ಐತಿಹಾಸಿಕ ಕಾನೂನು ಸುಧಾರಣೆಯಾಗಿದೆ ಎಂದರು.ಹಿಂದೂ ಸಮಾಜದಲ್ಲಿ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನ, ಏಕಪತ್ನಿತ್ವ ಮತ್ತು ದತ್ತು ಸ್ವೀಕಾರದಂತಹ ಸಮಾನ ಹಕ್ಕುಗಳನ್ನು ತರುವ ಮೂಲಕ ಲಿಂಗ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸಲು ಪ್ರಯತ್ನಿಸಿತು. ತೀವ್ರ ವಿರೋಧದ ನಂತರ ಕಾಯ್ದೆಯನ್ನು ಪ್ರತ್ಯೇಕ ಕಾಯ್ದೆಗಳಾಗಿ ಅಂಗೀಕರಿಸಲಾಯಿತು ಎಂದರು.ಮಹಿಳೆಯರಿಗೆ ಶಿಕ್ಷಣ ನೀಡಿ ಸಂವಿಧಾನ ಬದ್ದವಾದ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡವ ನಿಟ್ಟಿನಲ್ಲಿ ಹೋರಾಟ ಮಾಡಿದ ಅಂಬೇಡ್ಕರ್ ಸಮಾಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಾಗೂ ಜಾತೀಯತೆ ವಿರುದ್ಧ ಹೋರಾಡಿದರು. ವಿಶ್ವ ನಾಯಕರಾದ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಯುವಜನತೆಯೂ ಶಿಕ್ಷಣವನ್ನು ಮುಖ್ಯವಾಗಿ ಪಡೆಯಬೇಕು ಎಂದರು.