ಸಂವಿಧಾನ ಬದಲಾವಣೆ ದೇಶಕ್ಕೆ ಅಪಾಯ: ಮಾಜಿ ಸಚಿವ ರಮಾನಾಥ ರೈ

| Published : Dec 07 2024, 12:30 AM IST

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಂವಿಧಾನದ ಬದಲಾವಣೆ ದೇಶಕ್ಕೆ ಅಪಾಯ. ಬಿಜೆಪಿಗರು ಸಂವಿಧಾನ ಬದಲಾವಣೆ ಹೇಳಿಕೆ ನೀಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭ ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರವೂಫ್, ಟಿ.ಹೊನ್ನಯ್ಯ, ಕೆಪಿಸಿಸಿ ಸದಸ್ಯೆ ಕೆ.ಅಪ್ಪಿ, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮೂಳೂರು, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಮತ್ತಿತರರು ಇದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಡಿಸಿಸಿ ಉಪಾಧ್ಯಕ್ಷ ಟಿ.ಹೊನ್ನಯ್ಯ ವಂದಿಸಿದರು.