ಸಾಂವಿಧಾನಿಕ ಆಶಯ ಪಾಲಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್‌

| Published : Nov 28 2024, 12:32 AM IST

ಸಾಂವಿಧಾನಿಕ ಆಶಯ ಪಾಲಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ವಿಶ್ವದಲ್ಲೇ ದೊಡ್ಡ ಲಿಖಿತ ಸಂವಿಧಾನ ಭಾರತಕ್ಕೆ ದಕ್ಕಿದೆ. ಇದರ ಆಶಯ ತಿಳಿದು ಮೂಲಭೂತ ಹಕ್ಕು ಪಡೆದು, ಕರ್ತವ್ಯಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲನೆ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಹೇಳಿದರು.

ದೊಡ್ಡಬಳ್ಳಾಪುರ: ವಿಶ್ವದಲ್ಲೇ ದೊಡ್ಡ ಲಿಖಿತ ಸಂವಿಧಾನ ಭಾರತಕ್ಕೆ ದಕ್ಕಿದೆ. ಇದರ ಆಶಯ ತಿಳಿದು ಮೂಲಭೂತ ಹಕ್ಕು ಪಡೆದು, ಕರ್ತವ್ಯಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲನೆ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನ ಎಲ್ಲ ವರ್ಗದ ಜನರಿಗೆ ಸಮಾನತೆ ಒದಗಿಸುವ ಜತೆಗೆ ತಾರತಮ್ಯ ತೊಡೆದು ಹಾಕಲು ನೂರಾರು ಕಾನೂನುಗಳನ್ನು ರೂಪಿಸಿದ ಬೃಹತ್ ಮಾದರಿ ಸಂವಿಧಾನವಾಗಿದೆ ಎಂದರು.

ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಡಾ. ಬಿ.ಆರ್ ಅಂಬೇಡ್ಕರ್ ಹತ್ತಾರು ದೇಶ ಸುತ್ತಿ ಅಲ್ಲಿನ ಕಾನೂನಿನ ಸಮಗ್ರ ಅಧ್ಯಯನ ಮಾಡಿ, ಅನ್ಯದೇಶಗಳು ಮೆಚ್ಚಿಕೊಳ್ಳುವಂತ ಭಾರತೀಯ ಸಂವಿಧಾನದ ಕೊಡುಗೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದ‌‌ಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮಾ ಟಿ.ಎಲ್.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

26ಕೆಡಿಬಿಪಿ2-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ್‌ ಚಾಲನೆ ನೀಡಿದರು. ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಇತರರಿದ್ದರು.