ಹೊಸಕೋಟೆ: ತಾಲೂಕಿನ ಚೊಕ್ಕಹಳ್ಳಿ ಗ್ರಾಪಂ ವ್ಯಾಪ್ತಿಯ ಮಲ್ಲಿಮಾಕನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗ್ರಾಪಂ ಮಾಜಿ ಸದಸ್ಯ ತಮ್ಮಯ್ಯಗೌಡ ಅವರು ತಂದೆ ದಿ.ಮುನಿಬಚ್ಚಪ್ಪ- ಭೈರಮ್ಮ ಸ್ಮರಣಾರ್ಥ ಬಲಮುರಿ ಗಣಪತಿ ದೇವಾಲಯವನ್ನು ನಿರ್ಮಿಸಿ ಸಮರ್ಪಿಸಿದರು.
ತಮ್ಮಯ್ಯಗೌಡ ಮಾತನಾಡಿ, ಶಾಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಭಕ್ತಿ, ಶಿಸ್ತು ಹಾಗೂ ಉತ್ತಮ ಸಂಸ್ಕಾರ ಬೆಳೆಸುವ ಉದ್ದೇಶದಿಂದ ವೈಯಕ್ತಿಕ ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ಬರುವ ಮುನ್ನ ಬಲಮುರಿ ಗಣಪತಿಗೆ ನಮಸ್ಕರಿಸಿ ವಿದ್ಯಾಭ್ಯಾಸದಲ್ಲಿ ಯಶಸ್ಸು ಸಾಧಿಸಲಿ ಎಂಬುದು ತಮ್ಮ ಆಶಯ. ಈ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಶಿಕ್ಷಕರು ಸಹಕರಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅವರು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಸೇವೆ ಸಲ್ಲಿಸುವಂತಾಗಲಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಲಿ ಎಂದು ಬಲಮುರಿ ಗಣಪತಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಪಿಡಿಒ ರವಿಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಚ್ಚೇಗೌಡ, ಸಿಆರ್‌ಪಿ ನಟರಾಜ್, ಮುಖಂಡರಾದ ನಕ್ಕನಹಳ್ಳಿ ವಿಶ್ವನಾಥ್ ಸೇರಿದಂತೆ ಗ್ರಾಮಸ್ಥರು, ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಫೋಟೋ : 10 ಹೆಚ್‌ಎಸ್‌ಕೆ 2 ಮತ್ತು 3
ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಿರುವ ಬಲಮುರಿ ಗಣಪತಿ ದೇವಾಲಯದ ಲೋಕಾರ್ಪಣೆಯಲ್ಲಿ ಗ್ರಾಪಂ ಮಾಜಿ ಸದಸ್ಯ ತಮ್ಮಯ್ಯಗೌಡ ಕುಟುಂಬ ಹೋಮ ಹವನ ನೆರವೇರಿಸಿದರು.