ಹನೂರು: ಹನೂರು-ಬಂಡಳ್ಳಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಚಂಗವಾಡಿ ಹಳ್ಳದ ಬಳಿ 3 ಕೋಟಿ ರು. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು
ಹನೂರು: ಹನೂರು-ಬಂಡಳ್ಳಿ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಚಂಗವಾಡಿ ಹಳ್ಳದ ಬಳಿ 3 ಕೋಟಿ ರು. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು.
ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ಹನೂರು ತಾಲೂಕಿನ ಬಂಡಳ್ಳಿ-ಶಾಗ್ಯ ಮುಖ್ಯರಸ್ತೆಯಲ್ಲಿ ಚಂಗವಾಡಿ ಹಳ್ಳದಲ್ಲಿ ಮಳೆಗಾಲದಲ್ಲಿ ಮಳೆ ನೀರು ರಭಸವಾಗಿ ಹರಿಯುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಲೋಕೋಪಯೋಗಿ ಇಲಾಖೆಯಿಂದ ಬರಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.ಈ ಭಾಗದ ಬಹುದಿನಗಳ ಬೇಡಿಕೆಯಾದ ಸೇತುವೆ ನಿರ್ಮಾಣದಿಂದ ಸ್ಥಳೀಯ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣ 12 ಮೀಟರ್ ಅಗಲ ಹೊಂದಿದೆ. ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಕುಮಾರ್, ಚಾಮುಲ್ ಮಾಜಿ ಅಧ್ಯಕ್ಷ ರಾಜು ನಾಯ್ಡು ಗುರುಮಲ್ಲಪ್ಪ, ಶಿವಣಪ್ಪ, ಮಂಜೇಶ್ ಗೌಡ, ರಾಜೂಗೌಡ, ತಮ್ಮಯ್ಯ, ಗೋಪಾಲ್ ನಾಯಕ, ಜೇಸಿಮ್ ಪಾಷ, ನಾಗಯ್ಯ ಇತರರು ಉಪಸ್ಥಿತರಿದ್ದರು.23ಸಿಎಚ್‌ಎನ್14
ಹನೂರು ಚಂಗವಾಡಿ ಹಳ್ಳಕ್ಕೆ ಮೂರು ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿಗಾಗಿ ಮಂಜುನಾಥ್ ಶಂಕುಸ್ಥಾಪನೆ ನೆರವೇರಿಸಿದರು.