ಸಾರಾಂಶ
ತುರುವೇಕೆರೆ: ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ತಾಲೂಕಿನ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇಕೆರೆ ಕೆರೆ ಕೋಡಿ ಬಳಿ ಸಣ್ಣ ನೀರಾವರಿ ಇಲಾಖಾ ವತಿಯಿಂದ ಸುಮಾರು ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸರಣಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಂತರ್ಜಲವೃದ್ದಿಗೆ ಹಳ್ಳಗಳಿಗೆ ಚೆಕ್ ಡ್ಯಾಮ್‌ಗಳ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಈ ಭಾಗದಲ್ಲಿ ಸಾಕಷ್ಟು ಕೆಲಸಗಳಾಗಿವೆ. ಹೇಮಾವತಿ ಇಲಾಖೆಯಿಂದಲೂ ತಡೆಗೋಡೆ, ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಕಾಮಗಾರಿಗಳನ್ನು ಸಹಾ ಕೈಗೆತ್ತಿಕೊಳ್ಳಲಾಗುವುದು. ಉತ್ತಮ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತೆ ಎಂಜಿನಿಯರ್ ಗಳಿಗೆ ಮತ್ತು ಗುತ್ತಿಗೆದಾರರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೂಚಿಸಿದರು. ಈ ಸಂದರ್ಭದಲ್ಲಿ ಕೊಡಗಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಿರಣ್‌ಕುಮಾರ್ ಸದಸ್ಯ ದೇವರಾಜು, ಮುಖಂಡರಾದ ಆಬಲಕಟ್ಟೆ ರಾಮಣ್ಣ, ಕೊಟ್ಟೂರನಕೊಟ್ಟಿಗೆ ಮಂಜಣ್ಣ, ಹುಚ್ಚಯ್ಯ, ಸಿದ್ಧಲಿಂಗಯ್ಯ, ನಾಗೇಶ್, ಜವರಪ್ಪ, ಕಾರ್ತಿಕ್, ಎಇಇ ದೊಡ್ಡಯ್ಯ ಎ.ಇ.ಮಧುಸೂಧನ್, ನರಸಿಂಹಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.