ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹೃದಯ ಭಾಗದಲ್ಲಿ ನೂತನ ಮೆಘಾ ಮಾರ್ಕೆಟ್ ನಿರ್ಮಾಣಕ್ಕೆ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಫೆ.27 ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವ್ಯಾಪಾರಸ್ಥರು, ಸಂಘ ಸಂಸ್ಥೆಯ ಮುಖಂಡರು, ರಾಜಕೀಯ ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹಾಗೂ ಅಧ್ಯಕ್ಷ ಮೈಬೂಬ ಗೊಳಸಂಗಿ ಕೋರಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಹೃದಯ ಭಾಗದಲ್ಲಿ ನೂತನ ಮೆಘಾ ಮಾರ್ಕೆಟ್ ನಿರ್ಮಾಣಕ್ಕೆ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಫೆ.27 ರಂದು ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವ್ಯಾಪಾರಸ್ಥರು, ಸಂಘ ಸಂಸ್ಥೆಯ ಮುಖಂಡರು, ರಾಜಕೀಯ ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹಾಗೂ ಅಧ್ಯಕ್ಷ ಮೈಬೂಬ ಗೊಳಸಂಗಿ ಕೋರಿದರು.ಪಟ್ಟಣದ ಪುರಸಭೆ ಸಭಾಭವನದಲ್ಲಿ ಮಂಗಳವಾರ ನಡೆದ ಪಟ್ಟಣದ ಗಣ್ಯರ ಹಾಗೂ ವ್ಯಾಪಾರಸ್ಥರ, ಸಾರ್ವಜನಿಕರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪಟ್ಟಣದ ಹೃದಯ ಭಾಗದಲ್ಲಿ ಸುಸಜ್ಜಿತ ಮೆಗಾ ಮಾರ್ಕೆಟ್ ನಿರ್ಮಿಸಬೇಕೆಂಬ ಸ್ಥಳೀಯ ವ್ಯಾಪಾರಸ್ಥರ ಕನಸು, ಶಾಸಕ ಸಿ.ಎಸ್. ನಾಡಗೌಡ ಅವರ ಪರಿಶ್ರಮದಿಂದ ನೆರವೇರುತ್ತಿದೆ. ಅದಕ್ಕಾಗಿ ಸರ್ಕಾರದಿಂದ ಸುಮಾರು ₹ 15 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದು, ಗುಣಮಟ್ಟದ ಮೆಗಾ ಮಾರ್ಕೆಟ್ ನಿರ್ಮಾಣಕ್ಕೆ ಚಾಲನೆ ಸಿಕ್ಕಿರುವುದು ಸಂತಸ ತಂದಿದೆ ಎಂದರು.ಅದರಂತೆ ಪಟ್ಟಣದ ಇನ್ನುಳಿದ ಎಲ್ಲ ವಾರ್ಡುಗಳಲ್ಲಿನ ರಸ್ತೆ, ಚರಂಡಿ, ಕುಡಿಯುವ ನೀರು ವಿದ್ಯುತ್ ಸೇರಿದಂತೆ ಇತರೇ ಮೂಲಬೂತ ಸೌಲಭ್ಯಗಳು ಸೇರಿದಂತೆ ವಿವಿಧ ಕಡೆಗಳಲ್ಲಿರುವ ಪುರಸಭೆ ವ್ಯಾಪ್ತಿಯ ಜಾಗೆಯಲ್ಲಿ ನೂತನ ಮಳಿಗೆಗಳನ್ನು ನಿರ್ಮಿಸಿ ಪುರಸಭೆಗೆ ಆದಾಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಇನ್ನಷ್ಟು ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದಾರೆ ಅವೇಲ್ಲ ಕಾಮಗಾರಿಗಳನ್ನು ಆದಷ್ಟು ಬೇಗ ತ್ವರಿತಗತಿಯಲ್ಲಿ ಕೈಗೊಳ್ಳುವುದರೊಂದಿಗೆ ಸುಂದರ ಹಾಗೂ ಮಾದರಿ ಪಟ್ಟಣ ನಿರ್ಮಿಸಲಾಗುವುದು ಎಂದರು.ವ್ಯಾಪಾರಸ್ಥ ವಾಸುದೇವ ಶಾಸ್ತ್ರೀ ಮಾತನಾಡಿ, ಈ ಹಿಂದೆ ಪಟ್ಟಣದ ಹೃದಯ ಭಾಗದಲ್ಲಿದ್ದ ಹಳೆ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಗೊಂಡಿದ್ದರೂ ವ್ಯಾಪಾರಸ್ಥರು ಕಳೇದ 50- 60 ವರ್ಷಗಳಿಂದ ವಹಿವಾಟು ನಡೆಸಿಕೊಂಡು ಬಂದಿದ್ದಾರೆ. ಸದ್ಯ ನೂತನವಾಗಿ ನಿರ್ಮಿಸುತ್ತಿರುವ ಮೆಗಾ ಮಾರ್ಕೆಟ್‌ನಲ್ಲಿ ಹಳೆಯ ಅಂಗಡಿ ಮಾಲಿಕರಿಗೆ ಪ್ರಥಮ ಆದ್ಯತೆ ನೀಡಿದರೆ ಅನುಕೂಲವಾಗುತ್ತದೆ. ಜೊತೆಗೆ ಈ ನೂತನ ಮೆಗಾ ಮಾರ್ಕೆಟ್ ಭೂಮಿ ಪೂಜೆ ನೆರವೇರಿಸುತ್ತಿರುವಲ್ಲಿ ಯಶಸ್ವಿಗೆ ಶ್ರಮಿಸುತ್ತಿರುವ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹಾಗೂ ಅಧ್ಯಕ್ಷ ಮೈಬೂಬ ಗೊಳಸಂಗಿ ಅವರ ಆಡಳಿತ ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ನಿಂಗಪ್ಪ ಚೆಟ್ಟೇರ, ಪುರಸಭೆ ಸದಸ್ಯರಾದ ವಿರೇಶ ಹಡಲಗೇರಿ, ಸಮೀರ ದ್ರಾಕ್ಷೀ, ಶಾಹಾಝದಬಿ ಹುಣಸಗಿ, ಶ್ರೀಕಾಂತ ಹಿರೇಮಠ, ಮಹಾಂತೇಶ ಬೂದಿಹಾಳಮಠ, ನಾಮನಿರ್ದೇಶಿತ ಸದಸ್ಯರಾದ ಗೋಪಿ ಮಡಿವಾಳರ, ಸಂತೋಷ ನಾಯ್ಕೋಡಿ ಸೇರಿದಂತೆ ಹಲವು ವ್ಯಾಪಾರಸ್ಥರು ಹಾಜರಿದ್ದರು.