ಸಾರಾಂಶ
ಶೃಂಗೇರಿಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ ಎಂದು ಶ್ರೀ ವಿಧುಶೇಖರ ಭಾರತಿ ತೀರ್ಥ ಸ್ವಾಮಿ ತಿಳಿಸಿದರು.
ಶ್ರೀ ಅಭಿನವ ವಿದ್ಯಾತೀರ್ಥ ಆಸ್ಪತ್ರೆಯಲ್ಲಿ ನೂತನ ಐಪಿಡಿ ಬ್ಲಾಕ್ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಶೃಂಗೇರಿಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡ ನಿರ್ಮಿಸಲಾಗಿದೆ. ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದೆ ಎಂದು ಶ್ರೀ ವಿಧುಶೇಖರ ಭಾರತಿ ತೀರ್ಥ ಸ್ವಾಮಿ ತಿಳಿಸಿದರು.
ಪಟ್ಟಣದ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಐಪಿಡಿ ಬ್ಲಾಕ್ ಉದ್ಘಾಟಿಸಿದ ಸ್ವಾಮೀಜಿ ಆಶೀರ್ವಚನ ನೀಡಿಒಳರೋಗಿಗಳ ವಿಭಾಗ,ಹೋರ ರೋಗಿಗಳ ವಿಭಾಗ,ಶಸ್ತ್ರ ಚಿಕಿತ್ಸಾ ಕೋಠಡಿ, ವಿವಿಧ ತಜ್ಞ ವೈದ್ಯರ ನೇಮಕ ಮಾಡಲಾಗಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ಸೌಲಭ್ಯ ನೀಡಲು ಇನ್ನಷ್ಟು ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಇನ್ನಷ್ಟು ಸೇವೆ ದೊರೆಯಲಿದೆ. ನಮ್ಮ ಗುರುಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಆಶಯದಂತೆ ಅವರ ಗುರುಗಳ ಹೆಸರಿನಲ್ಲಿ ಆಸ್ಪತ್ರೆ ಇನ್ನಷ್ಟು ಉತ್ತಮ ಸೇವೆ ಒದಗಿಸಲಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಮಠದ ಆಡಳಿತಾಧಿಕಾರಿ ಪಿ.ಎ.ಮುರುಳಿ,ಆಸ್ಪತ್ರೆ ಆಡಳಿತ ವಿಭಾಗದ ಡಾ.ಲಕ್ಷ್ಮಿ ರಾಘವನ್, ಡಾ.ಪ್ರಣವ್,ರಂಗನಾಥ್,ಡಾ.ಸುಹಾಸ್,ಜಗದ್ಗುರುಗಳ ಆಪ್ತ ಸಹಾಯಕ ಶಮಂತ ಶರ್ಮ ಮತ್ತಿತರರು ಉಪಸ್ಥಿತರಿದ್ದರು.13 ಶ್ರೀ ಚಿತ್ರ 2-
ಶೃಂಗೇರಿ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಐಪಿಡಿ ಬ್ಲಾಕ್ ನ್ನು ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಉದ್ಘಾಟಿಸಿದರು.