ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದಲ್ಲಿ ವಿವಿಧ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ, ತಾಲೂಕು ಆಡಳಿತಗಳ ವೈಫಲ್ಯ ಖಂಡಿಸಿ ಹಲವು ದಿನಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ವಿಜಯಪುರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು. ಅಲ್ಲದೇ, ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಪಟ್ಟಣದಲ್ಲಿ ವಿವಿಧ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾ, ತಾಲೂಕು ಆಡಳಿತಗಳ ವೈಫಲ್ಯ ಖಂಡಿಸಿ ಹಲವು ದಿನಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ವಿಜಯಪುರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿದರು. ಅಲ್ಲದೇ, ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಭರವಸೆ ನೀಡಿದರು.

ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಪ್ರಕಾಶ ಗುಡಿಮನಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಕುರಿತು ಮಾಹಿತಿ ನೀಡಿದರು. ನಂತರ ಪಟ್ಟಣದಲ್ಲಿ ಸುಮಾರು ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಡಿವೈಎಸ್ಪಿ ಟಿ.ಎಸ್.ಸುಲ್ಫಿ ಸೇರಿದಂತೆ ತಾಲೂಕು ವಿವಿಧ ಇಲಾಖೆಗಳ ಮಟ್ಟದ ಅಧಿಕಾರಿಗಳ ಜೊತೆ ಚಾಲನೆ ನೀಡಿದರು.ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ನಿಂಗಣ್ಣ ಬಿರಾದಾರ, ತಾಪಂ ಇಒ ಭಾರತಿ ಚಲುವಯ್ಯ, ಡಿವೈಎಸ್ಪಿ ಟಿ.ಎಸ್.ಸುಲ್ಪಿ, ಪಿಎಸ್ಐ ಸಚಿನ್ ಆಲಮೇಲಕರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ಮುಖಂಡರಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಶರಣು ಶಿಂದೆ, ಲಕ್ಕಪ್ಪ ಬಡಿಗೇರ, ಮಲ್ಕಪ್ಪ ಬಾಗೇವಾಡಿ, ನಜೀರ ಬೀಳಗಿ, ರಾಜಕುಮಾರ ಸಿಂದಗೇರಿ, ಬಸವರಾಜ ಇಂಗಳಗಿ, ಯಮನಪ್ಪ ಭೂತಾಳಿ, ಪರಸು ಬಡಿಗೇರ, ಅಶೋಕ ಗುಡಿಸಲಮನಿ, ಪ್ರಶಾಂತ ದೊಡ್ಡಮನಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘಟನೆಗಳ ಮುಖಂಡರು ಹಾಗೂ ಪಟ್ಟಣದ ಪ್ರಮುಖರು ಇದ್ದರು.----ಬಾಕ್ಸ್‌

ಇದು ಕನ್ನಡಪ್ರಭ ವರದಿಯ ಫಲಶ್ರುತಿ

ದೇವರಹಿಪ್ಪರಗಿ ಪಟ್ಟಣದಲ್ಲಿ ಸುಮಾರು ₹ 2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಹೆಚ್ಚಿನ ಅನುದಾನ ನೀಡುವಂತೆ ಅನಿರ್ಧಿಷ್ಟಾವಧಿ ಧರಣಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಒತ್ತಾಯಿಸುತ್ತಿದ್ದರು. ಈ ಕುರಿತು ಕನ್ನಡಪ್ರಭ ಪತ್ರಿಕೆ ನನಸಾಗದ ಡಾ.ಅಂಬೇಡ್ಕರ್ ಭವನ ಕನಸು! ಎಂಬ ಶೀರ್ಷಿಕೆಡಿ ಸೆ.12ರಂದು ವಿಶೇಷ ವರದಿ ಪ್ರಕಟಿಸಿತ್ತು. ಅದರ ಫಲಶೃತಿ ಎನ್ನುವಂತೆ ಗುರುವಾರ ಜಿಲ್ಲಾ ಎಡಿಸಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು.

--------

ಕೋಟ್‌

ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಾಕಷ್ಟು ಜಾಗ ಲಭ್ಯವಿದೆ. ಸರ್ಕಾರದ ನಿಯಮದ ಪ್ರಕಾರ ಭವನ ನಿರ್ಮಾಣ ಮಾಡಬೇಕಾಗಿದೆ. ಜಿಲ್ಲಾ ಎಡಿಸಿ ಡಾ.ಔದ್ರಾಮ್ ಅವರು ಹೋರಾಟಗಾರರ ಮನವೊಲಿಸಿದ್ದಾರೆ. ಸ್ಥಳೀಯ ಮುಖಂಡರ ಒತ್ತಾಯದ ಮೇರೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದರೆ. ಇನ್ನು ಹೆಚ್ಚಿನ ಸೌಲಭ್ಯ ದೊರಕಿಸಿಕೊಡಲಾಗುವುದು. ಪಟ್ಟಣ ಸೇರಿದಂತೆ ಬಮ್ಮನಜೋಗಿ ಗ್ರಾಮದ ಅಂಬೇಡ್ಕರ್ ಭವನಕ್ಕೆ ಇಂದು ಚಾಲನೆ ನೀಡಲಾಯಿತು.-ಮಹೇಶ ಪೋತದಾರ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ