ಸಾರಾಂಶ
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಕ್ಷೇತ್ರದಲ್ಲಿ ಅಂತರ್ಜಲ ವೃದ್ಧಿಗೆ ಹೆಚ್ಚು ಹೆಚ್ಚು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಕೆ.ಹೆಚ್. ಪುಟ್ಟಸ್ವಾಮಿ ಗೌಡ ತಿಳಿಸಿದರು.ತಾಲೂಕಿನ ತೊಂಡೇಭಾವಿ ಹೋಬಳಿಯ ಬೇವನಹಳ್ಳಿ ಗ್ರಾಮದಲ್ಲಿ ಅಟಲ್ ಭೂಜಲ ಯೋಜನೆಯಡಿಯಲ್ಲಿ 50 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಂತರ್ಜಲ ಮಟ್ಟ ಏರಿಕೆಚಿಕ್ ಡ್ಯಾಂ ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ. ಸುತ್ತಮುತ್ತ ಇರುವ ಬೋರ್‌ವೆಲ್‌ಗಳಿಗೆ ನೀರು ಸಮೃದ್ದಿಯಾಗಿ ಹೆಚ್ಚು ಅನುಕೂಲವಾಗುವುದಲ್ಲದೆ, ಬೆಳೆಗಳಿಗೆ ಉಪಯುಕ್ತವಾಗಲಿದೆ. ಜಾನುವಾರುಗಳು ಕುಡಿಯಲು ನೀರು ಅನುಕೂಲವಾಗಲಿದೆ. ಅಲ್ಲದೇ ಇಲ್ಲಿ ಸಂಗ್ರಹವಾಗಿರುವ ನೀರು ಶೇಖರಣೆಯಾಗಿ ಅಂತರ್ಜಲ ಹೆಚ್ಚಾಗಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಗ್ರಾಮೀಣ ಭಾಗಗಳಲ್ಲಿ ಅಂತರ್ಜಲ ವೃದ್ಧಿಸುವ ಸಲುವಾಗಿ ಕೆರೆಕಟ್ಟೆಗಳ ಅಭಿವೃದ್ಧಿ ಹಾಗೂ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಅಂತರ್ಜಲ ಮಟ್ಟ ವೃದ್ಧಿಯಾದರೆ ರೈತರ ಬದುಕು ಹಸನಾಗುತ್ತದೆ. ಕ್ಷೇತ್ರದ ರೈತರ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ರೈತರು ಸಹ ಒಂದೇ ಬೆಳೆ ಬೆಳೆಯದೆ ಮಿಶ್ರ ಬೆಳೆ ಬೆಳೆಯಬೇಕು ಎಂದು ಕೆ.ಹೆಚ್. ಪುಟ್ಟಸ್ವಾಮಿಗೌಡ ತಿಳಿಸಿದರು
ಅಧಿಕಾರಿಗಳೇ ಹೊಣೆಚೆಕ್ ಡ್ಯಾಂ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ, ಉತ್ತಮ ಗುಣಮಟ್ಟದಿಂದ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಕಳಪೆ ಕಾಮಗಾರಿ ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದರು.ಕೋಚಿಮುಲ್ ನಿರ್ದೇಶಕ ಜೆ. ಕಾಂತರಾಜು ಮಾತನಾಡಿ ಚಿಕ್ ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆಗಾಲದಲ್ಲಿ ನೀರು ನಿಂತ ಅಂತರ್ಜಲ ಹೆಚ್ಚಾಗುತ್ತದೆ. ಅವಶ್ಯಕತೆಯಿರುವ ಗ್ರಾಮಗಳನ್ನು ಗುರುತಿಸಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಕೆ.ಹೆಚ್.ಪಿ. ಫೌಂಡೇಶನ್ ಕಾರ್ಯದರ್ಶಿ ಶ್ರೀನಿವಾಸಗೌಡ, ಕೋಚಿಮುಲ್ ನಿರ್ದೇಶಕ ಜೆ. ಕಾಂತರಾಜು, ನಾಗಾರ್ಜುನ, ಮುಖಂಡರಾದ ಬಿ.ವಿ. ಗೋಪಿನಾಥ್, ಗ್ರಾ.ಪಂ ಅಧ್ಯಕ್ಷೆ ತೇಜಸ್ವಿನಿ ಉಪಾಧ್ಯಕ್ಷೆ ಶೈಲಜಾ, ಶಿವಾಜಿರಾವ್, ಲಕ್ಷ್ಮೀನಾರಾಯಣ, ವೆಂಕಟೇಶ್, ಉಮಾಶಂಕರ್, ಮಹದೇವ, ನರಸಿಂಹರೆಡ್ಡಿ, ನಾಗರಾಜ್, ನವೀನ್ ಕುಮಾರ್, ಜಗನ್ನಾಥ್, ಬಸಪ್ಪ,ಗೋಪಿ, ನಾಗಪ್ಪ, ರಮೇಶ್, ಪಿಡಿಒ ಸಂಧ್ಯಾ ಹಾಗೂ ಗ್ರಾಮಸ್ಥರು ಹಾಜರಿದ್ದರು.