ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ನಗರದ ವಿವಿಧ ಪ್ರದೇಶಗಳಲ್ಲಿ ಸ್ಥಳ ವೀಕ್ಷಣೆ ನಡೆಸಿದರು.
ಮಂಗಳೂರು ; ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ನಗರದ ವಿವಿಧ ಪ್ರದೇಶಗಳಲ್ಲಿ ಸ್ಥಳ ವೀಕ್ಷಣೆ ನಡೆಸಿದರು.
ಮಂಗಳೂರಿನಲ್ಲಿ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಹಾಗೂ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಹಾಗೂ ಕ್ರಿಕೆಟ್ ಆಟಗಾರರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವಿನಂತಿಯ ಮೇರೆಗೆ ನಗರದ ತಣ್ಣೀರುಬಾವಿ, ಬೆಂಗ್ರೆ, ಬೋಂದೆಲ್, ಮುಳೂರು, ಕಂದಾವರ, ಕುಡುಪು ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಕ್ರೀಡಾಂಗಣ ನಿರ್ಮಾಣಕ್ಕೆ ಸೂಕ್ತವಾದ ಸ್ಥಳಗಳ ಕುರಿತು ಪರಿಶೀಲನೆ ನಡೆಸಿದರು.ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುವುದರಿಂದ ಸ್ಥಳೀಯ ಕ್ರಿಕೆಟ್ ಆಟಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುವುದರ ಜೊತೆಗೆ, ಕ್ರೀಡಾ ಕ್ಷೇತ್ರದ ಬೆಳವಣಿಗೆಗೂ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.