ಸರ್ಕಾರ ಜಾಗ ಒದಗಿಸಿದಲ್ಲಿ ಪುತ್ತೂರಿನಲ್ಲಿ ಗೋ ಶಾಲೆ ನಿರ್ಮಾಣ: ಅರುಣ್ ಕುಮಾರ್ ಪುತ್ತಿಲ

| Published : Jan 01 2025, 12:01 AM IST

ಸರ್ಕಾರ ಜಾಗ ಒದಗಿಸಿದಲ್ಲಿ ಪುತ್ತೂರಿನಲ್ಲಿ ಗೋ ಶಾಲೆ ನಿರ್ಮಾಣ: ಅರುಣ್ ಕುಮಾರ್ ಪುತ್ತಿಲ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಳೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕನ್ನಡಪ್ರಭ ವಾರ್ತೆ ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮುಂದಿನ ಶ್ರೀನಿವಾಸ ಕಲ್ಯಾಣೋತ್ಸವದ ಒಳಗಡೆ ಪುತ್ತೂರಿನಲ್ಲಿ ದೊಡ್ಡ ಗೋಶಾಲೆಯೊಂದನ್ನು ಮಾಡಬೇಕೆಂದು ಸಂದೇಶ ನೀಡಿದ್ದರು. ಅದಕ್ಕೆ ಪೂರಕವಾಗಿ ಗೋ ಶಾಲೆಗೆ ಜಾಗಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗುವುದು. ಸರ್ಕಾರ ಜಾಗ ಕೊಟ್ಟಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಗೋ ಶಾಲೆ ನಿರ್ಮಾಣ ಮಾಡಲು ನಾವು ಸಿದ್ಧರಿದ್ದೇವೆ ಎಂದು ಪುತ್ತಿಲ ಪರಿವಾರ ಟಸ್ಟ್‌ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮಂಗಳವಾರ ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಳೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಕಲ್ಯಾಣೋತ್ಸವ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಇದ್ದರು.