ಮದ್ದೂರು ತಾಲೂಕು ಕ್ರೀಡಾಂಗಣದ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಸದನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಕಾರಾತ್ಮಕ ಉತ್ತರ ಸಿಕ್ಕಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ನಗರದಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಗಳಿವೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಸಂಪರ್ಕ ಸೇತುವೆ, ಕೆರೆ ಬಂಡು ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕು ಕ್ರೀಡಾಂಗಣದ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಸದನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಕಾರಾತ್ಮಕ ಉತ್ತರ ಸಿಕ್ಕಿದೆ ಎಂದರು.

ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಎಲ್ಲಾ ಗ್ರಾಮಗಳಲ್ಲೂ ರೀ ಸರ್ವೇ ಸಮಸ್ಯೆ ಬಗ್ಗೆ ಹೆಚ್ಚು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಸದನದ ಕಲಾಪ ವೇಳೆ ಸಚಿವರ ಗಮನ ಸೆಳೆಯಲಾಗಿತ್ತು. ಕಂದಾಯ ಸಚಿವ ಕೃಷ್ಣ ಭೈರೇಗೌಡರು ಇನ್ನು ಕೆಲ ದಿನಗಳಲ್ಲಿ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಕಳೆದ 20 ವರ್ಷಗಳಿಂದ ತಲೆದೂರಿರುವ ಆತಗೂರು ಹೋಬಳಿಯ ರೀ ಸರ್ವೇ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ರೀ ಸರ್ವೇ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ಈ ಪ್ರಕ್ರಿಯೆ ಅರ್ಧಕ್ಕೆ ನಿಂತಿತ್ತು ಎಂದರು.

ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದಾರೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೂಡ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಇದೇ ವೇಳೆ ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಮುಖಂಡರಾದ ಕೆಸ್ತೂರು ದಾಸೇಗೌಡ, ಚಂದ್ರ ನಾಯ್ಕ, ನಾಗೇಗೌಡ, ಶಂಕರಲಿಂಗೇಗೌಡ, ಶಿವರಾಮು, ಲಿಂಗರಾಜು, ದುಂಡನಹಳ್ಳಿ ಯೋಗೇಶ್, ನವೀನ್ ಕುಮಾರ್, ಕೃಷ್ಣ, ಪ್ರಸಾದ್, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್, ಸದಾ, ಕೆಾರ್ ಐಡಿಎಲ್ ಇಂಜಿನಿಯರ್ ರಾಕೇಶ್, ಪಿಡಿಓ ಮಧುಸೂದನ್ ಸೇರಿದಂತೆ ಹಲವರು ಹಾಜರಿದ್ದರು.