ಎಲ್ಲಾ ಸಮುದಾಯಗಳಿಗೂ ಭವನ ನಿರ್ಮಾಣ: ಶಾಸಕ ಕೆ.ಎಂ.ಉದಯ್

| Published : Sep 18 2024, 01:47 AM IST

ಸಾರಾಂಶ

ಮದ್ದೂರು ತಾಲೂಕಿನ ವಿವಿಧ ಹೋಬಳಿ ಮತ್ತು ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಸರ್ಕಾರಿ ಜಾಗಗಳಿವೆ. ಇಂತಹ ಜಾಗಗಳನ್ನು ಸರ್ವೆ ಕಾರ್ಯ ನಡೆಸಿ ಗುರುತಿಸುವ ಕಾರ್ಯಕ್ಕೆ ಶೀಘ್ರವಾಗಿ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ವಿಶ್ವಕರ್ಮ ಸಮುದಾಯ ಸೇರಿ ಎಲ್ಲಾ ಸಮುದಾಯಗಳ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಒದಗಿಸಲು ಕ್ರಮ ವಹಿಸುವುದಾಗಿ ಶಾಸಕ ಕೆ.ಎಂ.ಉದಯ್ ಮಗಳವಾರ ಹೇಳಿದರು.

ಪಟ್ಟಣದ ತಾಲೂಕು ಕಚೆರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ವಿಶ್ವಕರ್ಮ ಜನಾಂಗದಿಂದ ನಡೆದ 9 ನೇ ವರ್ಷದ ವಿಶ್ವಕರ್ಮ ಜಯಂತಿಯಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾತನಾಡಿದರು.

ತಾಲೂಕಿನ ವಿವಿಧ ಹೋಬಳಿ ಮತ್ತು ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಹಲವು ಸರ್ಕಾರಿ ಜಾಗಗಳಿವೆ. ಇಂತಹ ಜಾಗಗಳನ್ನು ಸರ್ವೆ ಕಾರ್ಯ ನಡೆಸಿ ಗುರುತಿಸುವ ಕಾರ್ಯಕ್ಕೆ ಶೀಘ್ರವಾಗಿ ಚಾಲನೆ ನೀಡಲಾಗುವುದು ಎಂದರು.

ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಸಮುದಾಯದ 2 ಗುಂಪುಗಳಲ್ಲಿ ಗೊಂದಲ ಉಂಟಾಗಿತ್ತು. ಒಗ್ಗೂಡಿಸಿ ಸೆ.28 ರಂದು ಅದ್ಧೂರಿಯಾಗಿ ಆಚರಿಸಲು ನನ್ನ ಬಯಕೆಯಾಗಿತ್ತು ತಿಳಿಸಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ, ಸಾಂತ್ವನ ಮ್ಯೂಸಿಕ್ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಪವಿತ್ರ ಆಚಾರ್ ಪ್ರಧಾನ ಭಾಷಣ ಮಾಡಿದರು. ಸೋಮನಹಳ್ಳಿ ಎಜುಕೇಷನ್ ಟ್ರಸ್ಟ್‌ ಪ್ರೊ.ಅನಂದ್ ಸಿದ್ದಪ್ಪ, ವಿರಾಟ್ ವಿಶ್ವಕರ್ಮ ಯುವಕರ ಸಂಘದ ಅಧ್ಯಕ್ಷ ಬಸವಚಾರಿ ಅವರನ್ನು ಸನ್ಮಾನಿಸಲಾಯಿತು. ಸಮಾಜದ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಸಮಾಜದ ಜಿಲ್ಲಾ ಉಸ್ತುವಾರಿ ತೈಲೂರು ಆನಂದಚಾರಿ, ತಾಲೂಕು ಮಹಿಳಾ ಅಧ್ಯಕ್ಷೆ ಸುವರ್ಣಪ್ರಸಾದ್ ಹಾಗೂ ಸೌಭಾಗ್ಯರಾಜಣ್ಣ ಮತ್ತು ವಿಶ್ವ ಕರ್ಮ ಜನಾಂಗದ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.