ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಆಸ್ಪತ್ರೆಗೆ ಹೊಸ ರೂಪ ನೀಡಲಾಗಿದೆ. ಎಲ್ಲ ವಿಭಾಗದ ಸೌಲಭ್ಯಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸಾರ್ವಜನಿಕರು ವೈದ್ಯಕೀಯ ಸೇವೆಗಾಗಿ ಖಾಸಗಿ ಆಸ್ಪತೆಗಳಿಗೆ ಸಾವಿರಾರು ರು.ಹಣ ವ್ಯಯಸಬೇಕಿತ್ತು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 90 ಲಕ್ಷ ರು. ವೆಚ್ಚದಲ್ಲಿ ಶವಾಗಾರ ಕಟ್ಟಡ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಲಿಪ್ಟ್ ಅಳವಡಿಕೆ ಹಾಗೂ ರ್‍ಯಾಂಪ್ ನಿರ್ಮಾಣ ಕಾಮಗಾರಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೌಲಭ್ಯಗಳನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಅದರಲ್ಲೂ ಗ್ರಾಮೀಣ ನರು ಗುಣಮಟ್ಟದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಆಸ್ಪತ್ರೆಗೆ ಹೊಸ ರೂಪ ನೀಡಲಾಗಿದೆ. ಎಲ್ಲ ವಿಭಾಗದ ಸೌಲಭ್ಯಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಸಾರ್ವಜನಿಕರು ವೈದ್ಯಕೀಯ ಸೇವೆಗಾಗಿ ಖಾಸಗಿ ಆಸ್ಪತೆಗಳಿಗೆ ಸಾವಿರಾರು ರು.ಹಣ ವ್ಯಯಸಬೇಕಿತ್ತು. ಅಲ್ಲದೇ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ, ಮೈಸೂರು, ಬೆಂಗಳೂರು ನಗರಗಳಿಗೆ ತೆರಳುತ್ತಿದ್ದ ಪರಿಸ್ಥಿತಿಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.ರಾಜ್ಯದ ಕೆಲ ತಾಲೂಕಿನಲ್ಲಿ ಇರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಳವಳ್ಳಿಗೆ ತಂದು 100 ಮತ್ತು 30 ಹಾಸಿಗೆವುಳ್ಳ ಸೌಲಭ್ಯವನ್ನು ಗ್ರಾಮೀಣ ಪ್ರದೇಶದ ಜನರಿಗೆ ನೀಡಲಾಗಿದೆ. ಜೊತೆಗೆ ಹಲವು ರೀತಿಯ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಸಾಕಷ್ಟು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೊರತೆ ಕಾಡುತ್ತಿದ್ದ ಆಧುನಿಕ ಶವಾಗಾರದ ನಿರ್ಮಾಣಕ್ಕೆ ಇದೀಗ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್, ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಪಾಲ್ಗೊಂಡಿದ್ದರು.ಇಂದು ವಿದ್ಯುತ್ ವ್ಯತ್ಯಯ
ಮಂಡ್ಯ: 66/11 ಕೆ.ವಿ ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 12ರಂದು ಬೆಳಗ್ಗೆ 09 ರಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜಿ.ಮಲ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳಾದ ಜಿ.ಮಲ್ಲಿಗೆರೆ, ಹೊನ್ನೆಮಡು, ಹುನಗನಹಳ್ಳಿ, ನಂಜೇನಹಳ್ಳಿ, ಮುತ್ತೆಗೆರೆ, ತಿಪ್ಪಾಪುರ, ಬುಂಡಾರೆಕೊಪ್ಪಲು, ಎಂ.ಹಟ್ನ, ಸಂಗಾಪುರ ಜವನಹಳ್ಳಿ, ಮಲ್ಲೇನಹಳ್ಳಿ, ಛತ್ರನಹಳ್ಳಿ, ಬಿಲ್ಲೇನಹಳ್ಳಿ, ಬಂಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.