ಸಾರಾಂಶ
ಶಿಕಾರಿಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಪೂರಕವಾಗಿ ಹಾಸ್ಟೆಲ್ ಕೊರತೆಯಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗದಂತೆ ಹೊಸ ಹಾಸ್ಟೆಲ್ ನಿರ್ಮಾಣ ಪ್ರಮುಖ ಆದ್ಯತೆಯಾಗಿದೆ ಎಂದು ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ಗುರುವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೇಲುಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು, ಕೋಟ್ಯಾಂತರ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣವಾದ ಹೊಸ ಕಟ್ಟಡ, ಒಳಾಂಗಣ ಕ್ರೀಡಾಂಗಣ ಸಹಿತ ಖಾಸಗಿ ಕಾಲೇಜುಗಳಿಗೆ ಸಮಾನವಾಗಿ ವಿದ್ಯಾರ್ಥಿಗಳ ಅಗತ್ಯತೆಗೆ ಎಲ್ಲ ರೀತಿಯ ಸೌಲಭ್ಯದಿಂದ ಕಾಲೇಜು ಪಠ್ಯದ ಜತೆಗೆ ಕ್ರೀಡೆ ಮತ್ತಿತರ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ನುರಿತ ಉಪನ್ಯಾಸಕರ ತಂಡದಿಂದ ಕಾಲೇಜು ಹಲವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದು ಹಲವು ರ್‍ಯಾಂಕ್ ಪಡೆದ ಕಾಲೇಜು ಬಗ್ಗೆ ಸಹಜವಾಗಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ದಾಖಲಾಗುತ್ತಿದ್ದಾರೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳ ಅಗತ್ಯತೆಗೆ ಸಮನಾಗಿ ಹಾಸ್ಟೆಲ್ ಕೊರತೆಯನ್ನು ನೀಗಿಸುವುದು ತುರ್ತು ಅಗತ್ಯವಾಗಿದೆ. ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ಸಂಖ್ಯೆ ಅಧಿಕವಾಗಿರುವುದರಿಂದ ಹೊಸ ಹಾಸ್ಟೆಲ್ ನಿರ್ಮಾಣ ಅನಿವಾರ್ಯವಾಗಿದ್ದು ಕೂಡಲೇ ಈ ಬಗ್ಗೆ ಹೆಚ್ಚಿನ ನಿಗಾವಹಿಸುವುದಾಗಿ ತಿಳಿಸಿದರು. ಕಾಲೇಜಿನಲ್ಲಿರುವ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿರುವುದರಿಂದ ಕಂಪ್ಯೂಟರ್ ಕೊರತೆ, ದ್ವಿಚಕ್ರ ವಾಹನ ನಿಲ್ದಾಣದಲ್ಲಿನ ಅವ್ಯವಸ್ಥೆಯಿಂದಾಗಿ ಮಳೆಗಾಲದಲ್ಲಿ ವಾಹನ ನಿಲುಗಡೆ ಸಮಸ್ಯೆ, ಡಿ ದರ್ಜೆ ಹಗಲು ಕಾವಲುಗಾರ, ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ನಿಲುಗಡೆ ಮೂಲಕ ವಿದ್ಯಾರ್ಥಿಗಳು ತೆರಳಲು ಸೂಕ್ತ ಕ್ರಮಕ್ಕೆ ಪ್ರಾಚಾರ್ಯ ಡಾ.ಬಿ.ಜಿ ಚನ್ನಪ್ಪ ಶಾಸಕರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ದಾನಿಗಳ ಸಹಕಾರದಿಂದ ಕಾಲೇಜಿಗೆ ಅಗತ್ಯವಿರುವ 30-40 ಕಂಪ್ಯೂಟರ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೆ, ವಿಶಾಲವಾದ ನೂತನ ತೆರೆದ ಆಡಿಟೋರಿಯಂನಲ್ಲಿ ಪ್ರತಿಧ್ವನಿ ಹೋಗಲಾಡಿಸಲು, ದ್ವಿಚಕ್ರ ವಾಹನ ನಿಲ್ದಾಣಕ್ಕೆ ಅಗತ್ಯವಾಗಿರುವ ಟಾರ್ ಮೂಲಕ ಮೆಟ್ಲಿಂಗ್‌ನಿಂದ ಮಳೆಗಾಲದ ಸಮಸ್ಯೆಗೆ ಶಾಶ್ವತ ಪರಿಹಾರ, ಮುಖ್ಯ ರಸ್ತೆಯಲ್ಲಿ ಬಸ್ ನಿಲುಗಡೆಗೆ ತುರ್ತು ಕ್ರಮ ಕೈಗೊಳ್ಳುವುದಾಗಿ ಬರವಸೆ ನೀಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾಲೇಜಿಗೆ ಅಗತ್ಯವಿರುವ ಎಲ್ಲ ಸೌಲಭ್ಯದ ಜತೆಗೆ ಕುಂದುಕೊರತೆಗಳನ್ನು ಪರಿಹರಿಸಲು ಸಿದ್ಧವಿರುವುದಾಗಿ ತಿಳಿಸಿದರು.ಈ ಸಂದರ್ಬದಲ್ಲಿ ಕಾಲೇಜು ಅಭಿವೃದ್ಧ ಸಮಿತಿ ಸದಸ್ಯ ಕೃಷ್ಣೋಜಿರಾವ್, ಸುನೀತ, ಅಣ್ಣಪ್ಪ, ಭೀಮಾನಾಯ್ಕ, ಸುರೇಶ್ ಸಹಿತ ಉಪನ್ಯಾಸಕರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))