ಸಾರಾಂಶ
ಸುಗಮ ಸಂಚಾರಕ್ಕಾಗಿ ಗುಣಮಟ್ಟದ ರಸ್ತೆಗಳ ನಿರ್ಮಾಣ ಅಗತ್ಯ, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಸ್ತೆಗಳ ಅಭಿವೃದ್ಧಿ ಹಾಗೂ ಸುಧಾರಣೆಗೆ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಬ್ಯಾಡಗಿ: ಸುಗಮ ಸಂಚಾರಕ್ಕಾಗಿ ಗುಣಮಟ್ಟದ ರಸ್ತೆಗಳ ನಿರ್ಮಾಣ ಅಗತ್ಯ, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಸ್ತೆಗಳ ಅಭಿವೃದ್ಧಿ ಹಾಗೂ ಸುಧಾರಣೆಗೆ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ಸುಮಾರು 3.20 ಕೋಟಿ ವೆಚ್ಚದಲ್ಲಿ ಕಲ್ಲೇದವರು ಬುಡಪನಹಳ್ಳಿ, ರಸ್ತೆ ಸುಧಾರಣೆ ಹಾಗೂ ಸಿಡಿ ನಿರ್ಮಾಣ ಕಾಮಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ ಆದ್ಯತೆಗೆ ಅನುಗುಣವಾಗಿ ಉತ್ತಮ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೇ ಸಾಗಿವೆ ಎಂದರು.ತಾಲೂಕಿನಲ್ಲಿ ಇತೀಚೆಗಷ್ಟೆ ₹ 22 ಕೋಟಿ ವೆಚ್ಚದಲ್ಲಿ ಶಿಡೇನೂರ ಬ್ಯಾಡಗಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಅಭಿವೃದ್ಧಿಯಲ್ಲಿ ಯಾವುದೇ ರಾಜಿಮಾತಿಲ್ಲ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿಗಳು ಸರ್ಕಾರದಿಂದ ನಡೆಯಲಿದೆ ಎಂದರು.
ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿ ಕೆಲಸ ನಡೆಸುತ್ತಿದೆ, ನುಡಿದಂತೆ ನಡೆಯುವ ಮೂಲಕ ಜನರ ಮನಸ್ಸಲ್ಲಿ ಶಾಶ್ವತವಾಗಿ ನೆಲೆಸುವಂತೆ ಕೆಲಸ ನಿರ್ವಹಿಸುತ್ತಿದ್ದೇವೆ. ಕಳೆದ ಒಂದೂವರೆ ವರ್ಷದಿಂದ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸಗಳನ್ನು ನಿರ್ವಹಿಸಿಕೊಂಡು ಬಂದಿದೆ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ನಾಗರಾಜ ಆನ್ವೇರಿ, ದಾನಪ್ಪ ಚೂರಿ, ಸುರೇಶಗೌಡ ಪಾಟೀಲ, ಚನ್ನಬಸಪ್ಪ ಹುಲ್ಲತ್ತಿ, ಶಂಭನಗೌಡ ಪಾಟೀಲ, ಮುತ್ತಪ್ಪ ಶಿಗ್ಗಾವಿ, ಬಿ.ಕೆ. ಮೆಡ್ಲೇರಿ ಸೇರಿದಂತೆ ಗ್ರಾಪಂ.ಅಧ್ಯಕ್ಷ ಸದಸ್ಯರು ಗ್ರಾಮಸ್ಥರು ಹಾಗೂ ಉಪಸ್ಥಿತರಿದ್ದರು.