17 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣ

| Published : Jun 14 2024, 01:06 AM IST

ಸಾರಾಂಶ

ಮಾಗಡಿ: ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದಿದ್ದು ಅಂದಾಜು 17 ಕೋಟೆ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಮಾಗಡಿ: ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದಿದ್ದು ಅಂದಾಜು 17 ಕೋಟೆ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಭೂ ಮಂಜೂರಾತಿ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಕಟ್ಟಡ ನಿರ್ಮಾಣಕ್ಕೆ ಸಚಿವರು ಹಣ ಮಂಜೂರು ಮಾಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುತ್ತದೆ. ತಾಲೂಕಿನ ರೈತರು 50, 53ರಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಆರು ತಿಂಗಳ ಒಳಗೆ ವಿಲೇವಾರಿ ಮಾಡಲು ಅಧಿಕಾರಿಗಳು ಮತ್ತು ಭೂ ಮಂಜುರಾತಿ ಸಮಿತಿ ಸದಸ್ಯರ ಜೊತೆ ಚರ್ಚಿಸಿದ್ದೇನೆ ಹಲ ವರ್ಷಗಳಿಂದಲೂ 50, 53ರಲ್ಲಿ 500ಕ್ಕೂ ಹೆಚ್ಚು ರೈತರ ಅರ್ಜಿಗಳು ಬಾಕಿ ಇದ್ದು ಇನ್ನೂ ಆರು ತಿಂಗಳ ಒಳಗೆ ರೈತರ ಸಮಸ್ಯೆಗಳನ್ನು ಬಗೆಹರಿಸಿ ಭೂ ಮಂಜುರಾತಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. 57ರಲ್ಲಿ ಸಲ್ಲಿಸಿರುವ ಅರ್ಜಿಗಳಿಗೆ ಸರ್ಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಅನುಮತಿ ಸಿಕ್ಕ ಕೂಡಲೇ ಇದನ್ನು ಬಗೆಹರಿಸುತ್ತೇನೆಂದು ತಿಳಿಸಿದರು.

ಪಟ್ಟಣದ ಕಲ್ಯಾಗೇಟ್ ಬಳಿ ಮೊಬೈಲ್ ಟವರ್ ನಿರ್ಮಿಸುತ್ತಿರುವ ಬಗ್ಗೆ ಸ್ಥಳೀಯ ಮಹಿಳೆಯರು ಶಾಸಕ ಬಾಲಕೃಷ್ಣರಿಗೆ ದೂರು ನೀಡಿ ಜನನಿಬಿಡ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಿಸದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು. ಇದಕ್ಕೆ ಶಾಸಕರು ಈ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಕಾಮಗಾರಿ ಆರಂಭಿಸದಂತೆ ಸೂಚಿಸುತ್ತೇನೆಂದು ಭರವಸೆ ನೀಡಿದರು.

ಪುರಸಭೆಯಲ್ಲಿ 15ನೇ ಹಣಕಾಸಿನ ವಿಚಾರದಲ್ಲಿ ತಾರತಮ್ಯವಾಗಿದೆ ಎಂದು ಜೆಡಿಎಸ್ ಪುರಸಭಾ ಸದಸ್ಯರ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆಂದರು.

ಗ್ರಾಮ ಲೆಕ್ಕಾಧಿಕಾರಿಗಳು ಹೋಬಳಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಜಾಗ ಇರುವೆಡೆ ಹಣ ಮಂಜೂರಾಗುತ್ತಿದ್ದು, ಸ್ಮಶಾನ ಜಾಗದ ಸುತ್ತಲೂ ತಂತಿ ಬೇಲಿ ನಿರ್ಮಿಸಿ ಸ್ಮಶಾನ ಜಾಗ ಎಂದು ಬೋರ್ಡ್‌ ಹಾಕಬೇಕು ಒಂದು ವೇಳೆ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿದ್ದರೆ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಜಾಗ ತೆರವುಗೊಳಿಸಬೇಕು. ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಭೆ ಕರೆದಾಗ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಬೇಕು ಎಂದು ತಹಸೀಲ್ದಾರ್ ಶರತ್ ಕುಮಾರ್ ಹಾಗೂ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳಿಗೆ ಶಾಸಕ ಬಾಲಕೃಷ್ಣ ಸೂಚನೆ ನೀಡಿದರು.

ಸಭೆಯಲ್ಲಿ, ಬಗುರ್ ಹುಕುಂ ಕಮಿಟಿ ಸದಸ್ಯರಾದ ಆಗ್ರೋ ಪುರುಷೋತ್ತಮ್, ಗೆಜ್ಜಗುಪ್ಪೆ ಕುಮಾರ್, ಶಿರಸ್ತೆದಾರರಾದ ರಶ್ಮಿ, ಅರ್.ಐ.ಮಧು, ನಟರಾಜು, ವೆಂಕಟೇಶ್, ತಾಲೂಕು ವಲಯ ಅರಣ್ಯ ಇಲಾಖೆ ಅಧಿಕಾರಿ ಚೈತ್ರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ಪೋಟೋ 12ಮಾಗಡಿ2:

ಮಾಗಡಿ ತಾಲೂಕು ಕಚೇರಿ ಆವರಣದಲ್ಲಿ ಶಾಸಕ ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಭೂ ಮಂಜೂರಾತಿ ಸಭೆ ನಡೆಯಿತು. ತಹಸೀಲ್ದಾರ್ ಶರತ್ ಕುಮಾರ್ ಇತರರಿದ್ದರು.