ಕೊಡವ ಸಮಾಜದ ವತಿಯಿಂದ ಚೌಡ್ಲು ಗ್ರಾಮದಲ್ಲಿರುವ ಸಮಾಜದ ಜಾಗದಲ್ಲಿ ಶೀಘ್ರದಲ್ಲಿಯೇ ಸಮುದಾಯ ಭವನವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದರು.
ಸೋಮವಾರಪೇಟೆ: ಕೊಡವ ಸಮಾಜದ ವತಿಯಿಂದ ಚೌಡ್ಲು ಗ್ರಾಮದಲ್ಲಿರುವ ಸಮಾಜದ ಜಾಗದಲ್ಲಿ ಶೀಘ್ರದಲ್ಲಿಯೇ ಸಮುದಾಯ ಭವನವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದರು. ಶನಿವಾರ ಇಲ್ಲಿನ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದ ಅಭಿವೃದ್ದಿಗೆ ಸರ್ವ ಸದಸ್ಯರ ಸಹಕಾರ ಅಗತ್ಯ, ಸಮುದಾಯ ಭವನ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಆರ್ಥಿಕ ಸಹಾಯ ಮಾಡಬೇಕೆಂದು ಮನವಿ ಮಾಡಿದರು.
ಸಮಾಜದ ಉಪಾಧ್ಯಕ್ಷ ಬೊಳಂದಂಡ ಕುಟ್ಟಪ್ಪ, ಕಾರ್ಯದರ್ಶಿ ಕೊಚ್ಚೇರ ಅನಿಲ್ಕುಮಾರ್, ಖಜಾಂಚಿ ಪಾಡೆಯಂಡ ಮುತ್ತಣ್ಣ, ಸಹ ಕಾರ್ಯದರ್ಶಿ ಹಂಚೆಟ್ಟೀರ ನಿತಿನ್ ತಮ್ಮಯ್ಯ ಸೇರಿದಂತೆ ಎಲ್ಲಾ ನಿರ್ದೇಶಕರುಗಳು ಉಪಸ್ಥಿತರಿದ್ದರು.