ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರು ಮತ್ತು ಮತದಾರರ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ, ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ. ಬಿಜೆಪಿ ಮುಖಂಡರು ನನ್ನ ಮೇಲೆ ಇಟ್ಟಿರುವ ಭರವಸೆಗೆ ಯಾವುದೇ ಚ್ಯುತಿ ಬರದಂತೆ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಅವರು ತಿಳಿಸಿದರು.
- ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ---
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಕೇಂದ್ರದ ಬಿಜೆಪಿ ಮುಖಂಡರು ತೆಗೆದುಕೊಂಡಿರುವ ನಿರ್ಣಯಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಅಧಿಕೃತವಾಗಿ ಟಿಕೆಟ್ ಘೋಷಣೆಯಾದ ಬಳಿಕ ಪಟ್ಟಣದ ಬಿಜೆಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರು ಮತ್ತು ಮತದಾರರ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ, ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ. ಬಿಜೆಪಿ ಮುಖಂಡರು ನನ್ನ ಮೇಲೆ ಇಟ್ಟಿರುವ ಭರವಸೆಗೆ ಯಾವುದೇ ಚ್ಯುತಿ ಬರದಂತೆ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಅವರು ತಿಳಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪ್ರಿಯ ಯೋಜನೆಗಳೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಯಶಸ್ವಿಗೆ ಮಾನದಂಡವಾಗಲಿದೆ ಎಂದರು.ಸಂಸದ ಪ್ರತಾಪ್ ಸಿಂಹ, ತುರ್ತು ಕಾರ್ಯನಿಮಿತ್ತ ದೆಹಲಿಗೆ ತೆರಳಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಿರಿಯಾಪಟ್ಟಣ ತಾಲೂಕಿನಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ, ಮಾಹಿತಿ ಪಡೆದು ಅಭಿವೃದ್ಧಿಯತ್ತ ಗಮನ ಹರಿಸುತ್ತೇನೆ ಎಂದರು.ಸಭೆಯಲ್ಲಿ ಮಾಜಿ ಸಚಿವ ಎಸ್.ಎ.. ರಾಮದಾಸ್, ಮಾಜಿ ಶಾಸಕ ಎಚ್.ಸಿ. ಬಸವರಾಜ್, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ. ರಾಜೇಂದ್ರ, ಮುಖಂಡರಾದ ಪಿ. ಪ್ರಶಾಂತ್ ಗೌಡ, ಶೋಮಶೇಖರ್ ಪ್ರಧಾನ ಕಾರ್ಯದರ್ಶಿ ರವಿ, ಅರುಣ್ ಶಿವರಾಂ, ಗಾಯಿತ್ರಿ, ಗೀತಾ ಮೊದಲಾದವರು ಇದ್ದರು.