ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ನಿಧಿಯಡಿ ಜಿಲ್ಲೆಯಲ್ಲಿ ನಾಲ್ಕು ಸುಸಜ್ಜಿತ ಶಾಲಾ ಕಟ್ಟಡಗಳನ್ನು ನಿರ್ಮಿಸಿದ್ದು, ಅವುಗಳ ದಾಖಲಾತಿಗಳನ್ನು ಕಂಪನಿ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರಿಗೆ ಹಸ್ತಾಂತರಿಸಿದರು

ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ನಿಧಿಯಡಿ ಜಿಲ್ಲೆಯಲ್ಲಿ ನಾಲ್ಕು ಸುಸಜ್ಜಿತ ಶಾಲಾ ಕಟ್ಟಡಗಳನ್ನು ನಿರ್ಮಿಸಿದ್ದು, ಅವುಗಳ ದಾಖಲಾತಿಗಳನ್ನು ಕಂಪನಿ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರಿಗೆ ಹಸ್ತಾಂತರಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಅವರನ್ನು ಭೇಟಿ ಮಾಡಿದ ಕಂಪನಿಯ ಸಿಎಸ್ ಆರ್ ವಿಭಾಗದ ಅಧಿಕಾರಿಗಳು ನಾಲ್ಕು ಕೆಪಿಎಸ್ ಶಾಲೆಗಳ ನಿರ್ಮಾಣ ಕಾರ್ಯವನ್ನು ವಿವರಿಸಿದ ಬಳಿಕ ಅದರ ದಾಖಲಿಗಳನ್ನು ಹಸ್ತಾಂತರ ಮಾಡಿದರು.

ಕನಕಪುರ ತಾಲೂಕಿನ ಹೆಗ್ಗನೂರಿನಲ್ಲಿ 30,913 ಚದರಡಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಮಾದರಿ ಶಾಲೆ, ಮಾಗಡಿ ತಾಲೂಕಿನ ಕುದೂರಿನಲ್ಲಿ 26,964 ಚದರಡಿಯಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ, ರಾಮನಗರ ತಾಲೂಕಿನ ಅವ್ವೇರಳ್ಳಿಯಲ್ಲಿ 27,394 ಚದರಡಿಯಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ರಾಮನಗರ ತಾಲೂಕಿನ ಪಾದರಹಳ್ಳಿಯಲ್ಲಿ 32,064 ಚದರಡಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಮಾದರಿ ಶಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಶಾಲಾ ಕಟ್ಟಡಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಲೋಕಾರ್ಪಣೆ ಮಾಡಲಿದ್ದಾರೆ.

ಈ ನಾಲ್ಕು ಶಾಲೆಗಳಿಗೂ ಅಗತ್ಯ ಪೀಠೋಪಕರಣಗಳು, ಅಡುಗೆ ಮನೆ ಉಪಕರಣಗಳು, ಪಾತ್ರೆಗಳು, ಸಂವಾದಾತ್ಮಕ ಸ್ಮಾಟ್೯ ಬೋಡ್೯ಗಳು, ಕ್ರೀಡಾ ಸಾಮಗ್ರಿಗಳನ್ನು ವಿದ್ಯಾರ್ಥಿಗಳು ಹಾಗೂ ಅಲ್ಲಿನ ಶಿಕ್ಷಕರ ಅನುಕೂಲಕ್ಕಾಗಿ ಒದಗಿಸಿಕೊಡಲಾಗಿದೆ. ಈ ನಾಲ್ಕು ಶಾಲೆಗಳು ಸೌಲಭ್ಯ ಹಾಗೂ ಗುಣಮಟ್ಟದಲ್ಲಿ ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲ ಜಿಲ್ಲೆಯ ಪೋಷಕರು ತಮ್ಮ ಮಕ್ಕಳನ್ನು ಇಲ್ಲಿ ದಾಖಲಿಸಿ ಉತ್ತಮ ಶಿಕ್ಷಣ ಪಡೆಯುವಂತೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್. ಸ್ವಾಮಿ, ಟೊಯೋಟೊ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ಆರ್ ವಿಭಾಗದ ಜನರಲ್ ಮ್ಯಾನೇಜರ್ ರೋಷನ್,

ಟೊಯೋಟೊ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ಆರ್ ವಿಭಾಗದ ವ್ಯವಸ್ಥಾಪಕ ಪ್ರಶಾಂತ್, ಸಿಎಸ್ಆರ್ ನಿಧಿಯ ಇಂಜಿನಿಯರ್ ವರುಣದೇವ್ , ಸಿಎಸ್ಆರ್ ನಿಧಿಯ ಸಂಯೋಜಕ ರಾಮಚಂದ್ರ ಹೆಗಡೆ ಉಪಸ್ಥಿತರಿದ್ದರು.

13ಕೆಆರ್ ಎಂಎನ್ 11,12.ಜೆಪಿಜಿ

11. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಟೊಯೋಟಾ ಕಂಪನಿಯ ಸಿಎಸ್ ಆರ್ ನಿಧಿ ಅಡಿಯಲ್ಲಿ ನಿರ್ಮಿಸಿದ ನಾಲ್ಕು ಕೆಪಿಎಸ್ ಶಾಲೆಗಳ ಕಟ್ಟಡ ನಿರ್ಮಾಣದ ದಾಖಲಾತಿಗಳನ್ನು ಕಂಪನಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.

12.ಪಾದರಹಳ್ಳಿಯಲ್ಲಿ ನಿರ್ಮಾಣಗೊಂಡಿರುವ ಕೆಪಿಎಸ್ ಶಾಲೆ.