ಸಾರಾಂಶ
ಕಳೆದ ಕೆಲವು ತಿಂಗಳಿನಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ಕಾಮಗಾರಿಗೆ ವೇಗ ಹೆಚ್ಚಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗೆ ವೇಗ ಹೆಚ್ಚಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.ಕಳೆದ ಕೆಲವು ತಿಂಗಳಿನಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ಈ ಬಗ್ಗೆ ಸ್ಥಳೀಯ ನಗರ ಪಂಚಾಯಿತಿ ಸದಸ್ಯ ಪುತ್ತು ಬಾವ, ಕಟ್ಟಡ ಕಾಮಗಾರಿ ಗುತ್ತಿಗೆದಾರರನ್ನು ಸಂಪರ್ಕಿಸಿದಾಗ ಸದ್ಯಕ್ಕೆ ಕಿನ್ನಿಗೋಳಿಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಕಾರ್ನಾಡ್ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ನಾರ್ಡ್‌ನಲ್ಲಿ ಅರ್ಧಂಬರ್ಧ ಕಾಮಗಾರಿ ನಡೆಸಿ, ಇದೀಗ ಕಿನ್ನಿಗೋಳಿಯಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಖಡಕ್ ಸೂಚನೆ ನೀಡಿ, ಮೊದಲು ಕಾರ್ನಾಡ್ ಬಳಿಯ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ..