ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

| Published : Mar 10 2024, 01:51 AM IST

ಸಾರಾಂಶ

ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿಎ ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್-ಚಂದ್ರಕಲಾ ದಂಪತಿ ನೀಡಿದ ಲ್ಯಾಪ್‌ಟಾಪ್‌ನ್ನು ವಿದ್ಯಾಪೋಷಕ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಹಸ್ತಾಂತರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಶನಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರುಗಿತು.ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು.ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಸಂಸ್ಥೆಯ ದಾನಿ ಯು.ಎಸ್. ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.ಸಮಾಲೋಚನಾ ಸಭೆಯ ಸಂಪನ್ಮೂಲ ವ್ಯಕ್ತಿಗಳಾಗಿ ಅದಮಾರು ಎಜುಕೇಶನಲ್ ಕೌನ್ಸೆಲ್‌ನ ಆಡಳಿತ ಅಧಿಕಾರಿಯಾದ ಡಾ. ಎ.ಪಿ. ಭಟ್, ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ತ್ರಿಶಾ ಸಂಸ್ಥೆಯ ಸಂಸ್ಥಾಪಕ ಗೋಪಾಲಕೃಷ್ಣ ಭಟ್, ಉಪನ್ಯಾಸಕ, ಕಲಾವಿದರೂ ಆದ ಶ್ರುತಕೀರ್ತಿ ರಾಜ್ ಭಾಗವಹಿಸಿದ್ದರು. ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿಎ ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್-ಚಂದ್ರಕಲಾ ದಂಪತಿ ನೀಡಿದ ಲ್ಯಾಪ್‌ಟಾಪ್‌ನ್ನು ವಿದ್ಯಾಪೋಷಕ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಹಸ್ತಾಂತರಿಸಿದರು.೨೩೦ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಶಿಬಿರದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್, ಅಗತ್ಯ ಸೂಚನೆಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ್, ಅಶೋಕ್ ಎಂ., ಗಣೇಶ್ ರಾವ್ ಎಲ್ಲೂರು ಸಹಕರಿಸಿದರು.