Consumption of Ganja: Individual Arrested
ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಗಾಂಜಾ ಸೇವಿಸಿರುವುದು ದೃಢವಾದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಸುರೇಶ (39) ಬಂಧಿತ ಆರೋಪಿ. ನ. 3ರ ರಾತ್ರಿ ಹೊಸಮನೆ 2ನೇ ಕ್ರಾಸ್ನಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಸುರೇಶ್ ಅನುಮಾನಾಸ್ಪದವಾಗಿ ನಿಂತಿದ್ದ. ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿತ್ತು. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಗಾಂಜಾ ಸೇವನೆ ದೃಢವಾಗಿದೆ ಎಂದು ದೂರಿನಲ್ಲಿ ಉಲ್ಲೇಖಸಿಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
