ಸವಿತಾ ಸಮಾಜ ‘1ಬಿ’ಗೆ ಸೇರ್ಪಡೆಗೆ ಚಿಂತನೆ

| Published : Feb 08 2024, 01:34 AM IST

ಸಾರಾಂಶ

ಸವಿತಾ ಸಮಾಯವನ್ನು ಬಿ1 ವರ್ಗಕ್ಕೆ ಸೇರ್ಪಡೆ ಮಾಡಲು ಮುಖ್ಯಮಂತ್ರಿಗಳ ಜತೆ ಮಾತನಾಡುತ್ತೇನೆ ಎಂದು ಸಚಿವ ಡಾ। ಜಿ.ಪರಮೇಶ್ವರ್‌ ಅವರ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸವಿತಾ ಸಮುದಾಯವನ್ನು 1ಬಿ ವರ್ಗಕ್ಕೆ ಸೇರ್ಪಡೆ ಮಾಡಲು, ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ₹50 ಕೊಟಿ ಅನುದಾನ ನೀಡಬೇಕೆಂಬ ಸಮುದಾಯದ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ಗೃಹ ಸಚಿವ ಡಾ। ಜಿ.ಪರಮೇಶ್ವರ ಭರವಸೆ ನೀಡಿದರು.

ರಾಜ್ಯ ಸವಿತಾ ಕಲಾ ಸಂಘದಿಂದ ಪುರಭವನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಲಾ ಸಮ್ಮೇಳನ ಮತ್ತು ದಿ.ಕರ್ಪೂರಿ ಠಾಕೂರ್ ಅವರ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅವಕಾಶ ವಂಚಿತರಿಗೆ ಸೌಲಭ್ಯ ಕಲ್ಪಿಸಲು ಆಯೋಗದ ಮೂಲಕ ಸಾಮಾಜಿಕ, ಶೈಕ್ಷಣಿಕ ಗಣತಿ ನಡೆಸಲಾಗಿದೆ. ಆದರೆ ವರದಿಯಲ್ಲಿ ಏನಿದೆ ಎಂಬುದು ತಿಳಿಯದೇ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದ ಅವರು, ದೇಶದಲ್ಲಿ ಜಾತಿ ವ್ಯವಸ್ಥೆ ನಿವಾರಣೆಗೆ ನಿರಂತರ ಹೋರಾಟ ನಡೆಯುತ್ತಿದ್ದರೂ ಜಾತಿ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿದೆ. ಮನುಷ್ಯನ ಹುಟ್ಟನ್ನು ಜಾತಿಯಿಂದ ಅಳೆಯಲಾಗುತ್ತಿದೆ. ಇದು ಸರಿಯಲ್ಲ. ಮನುಷ್ಯರನ್ನು ಮನುಷ್ಯರಂತೆ ಕಾಣಬೇಕು. ಬಿಹಾರದ ಮಾಜಿ ಮುಖ್ಯಮಂತ್ರಿ ದಿ.ಕರ್ಪೂರಿ ಠಾಕೂರ್ ಅವರು ಮಾದರಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಅವರಿಗೆ ಭಾರತ ರತ್ನ ನೀಡಿದ್ದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

ಕುಂಚೂರಿನ ಸವಿತಾ ಪೀಠದ ಸವಿತಾನಂದ ಸ್ವಾಮೀಜಿ, ಸಚಿವರಾದ ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಖಾನ್‌, ಕೆ.ಎನ್‌.ರಾಜಣ್ಣ, ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.