ಸಾರಾಂಶ
ಸಂವಿಧಾನ ದಿನಾಚರಣೆ । ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್‌ನಿಂದ ಸಂವಿಧಾನ ಸನ್ಮಾನ ಅಭಿಯಾನ । ಪ್ರತಿಜ್ಞಾ ವಿಧಿ ಬೋಧನೆ
ಕನ್ನಡಪ್ರಭ ವಾರ್ತೆ ಚಾಮರಾಜನಗರಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ತಮ್ಮ ಅಧಿಕಾರವಧಿಯಲ್ಲಿ ಪದೇ ಪದೇ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಜನರಿಗೆ ತಿಳಿಸುವ ಅವಶ್ಯಕತೆ ಬಹಳ ಇದೆ ಎಂದು ಬಿಜೆಪಿಯ ಜಿಲ್ಲೆಯ ಉಪಾಧ್ಯಕ್ಷ ಎನ್.ಮಹೇಶ್ ಆರೋಪಿಸಿದರು.
ನಗರದ ವರ್ತಕರ ಭವನದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ವತಿಯಿಂದ ನಡೆದ ಸಂವಿಧಾನ ಸನ್ಮಾನ ಅಭಿಯಾನ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನ.೨೬ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.
ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನಾವು ನಿಜ ಹೇಳೋಣ. ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಿಂದ ೭೫ ತಿದ್ದುಪಡಿಯನ್ನು ಮಾಡಲಾಗಿದೆ. ಕಾಂಗ್ರೆಸ್ಸೇತರ ಸರ್ಕಾರ ಕೇವಲ ೩೧ ಬಾರಿ ತಿದ್ದುಪಡಿ ತಂದಿದೆ. ಅದು ಸಹ ದೇಶದ ಅಭಿವೃದ್ದಿ ಹಾಗೂ ಸಾಮಾಜಿಕ ನ್ಯಾಯದ ಕಾರಣವಾಗಿದೆ ಎಂದು ಹೇಳಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಜಾಗೃತಿ ಅಭಿಯಾನವನ್ನು ಕಾಂಗ್ರೆಸ್ ಪಕ್ಷದವರು ಮಾಡುವುದು ಸರಿಯಲ್ಲ. ಅಂಬೇಡ್ಕರ್ ಹಾಗೂ ಸಂವಿಧಾನವನ್ನು ಅಪಮಾನಿಸಿದ ಕಾಂಗ್ರೆಸ್ ಬಹಳಷ್ಟು ಮೋಸ ಮಾಡಿದೆ. ಕಾಂಗ್ರೆಸ್ಸೇತರ ಸರ್ಕಾರ ಹಾಗೂ ಬಿಜೆಪಿ ಸರ್ಕಾರ ಬಂದ ನಂತರ ಕಾಂಗ್ರೆಸ್ಸಿಗರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಜ್ಞಾಪಕಕ್ಕೆ ಬರುತ್ತಿದೆ. ಇದರ ಸ್ವಾರ್ಥ ಸಾಧನೆ ಮತ್ತು ತುಷ್ಟೀಕರಣ ನೀತಿಯಿಂದ ದೇಶದ ಜನರಿಗೆ ಜಾಗೃತಿ ಮೂಡಿಸಲು ೨ ತಿಂಗಳ ಕಾಲ ಅಭಿಯಾನ ನಡೆಯಲಿದೆ ಎಂದರು.
ಮಾಜಿ ಶಾಸಕ ಎಸ್.ಬಾಲರಾಜ್ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಸಂವಿಧಾನ ಸನ್ಮಾನ ಸಂಯೋಜಕ ಪರಮಾನಂದ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಒಬಿಸಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಎಸ್.ಟಿ. ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಯಸುಂದರ್, ಮುಖಂಡ ಸಿ.ಎಂ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಎಸ್‌ಸಿ ಮೋರ್ಚ್ ಜಿಲ್ಲಾಧ್ಯಕ್ಷ ಮೂಡಳ್ಳಿ ಮೂರ್ತಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲರಾಜು ,ವೀರಭದ್ರಸ್ವಾಮಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್. ಸುಂದರ್, ಸೂರ್ಯ, ಜಿಡಿಎಲ್ ಸುರೇಶ್. ಕೂಡ್ಲೂರು ಶ್ರೀಧರ್ ಮೂರ್ತಿ, ಮಂಡಲ ಅಧ್ಯಕ್ಷ ವೃಷಬೇಂದ್ರಸ್ವಾಮಿ. ಮಹದೇಶ್ವರ ಬೆಟ್ಟ ಮಂಡಲ ಅಧ್ಯಕ್ಷ ರಾಜು, ನಲ್ಲೂರು ಪರಮೇಶ್, ರಾಮಣ್ಣ ಮೊದಲಾದವರು ಇದ್ದರು.