ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಿ

| Published : Jul 07 2024, 01:23 AM IST

ಸಾರಾಂಶ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಭಟ್ಕಳ ಘಟಕದಿಂದ ಶನಿವಾರ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಭಟ್ಕಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಸ್ಥಳೀಯ ಘಟಕದಿಂದ ಶನಿವಾರ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಸರ್ಕಾರವು ಎನ್‌ಪಿಎಸ್‌ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವ ಭರವಸೆ ನೀಡಿದ್ದು, ಶೀಘ್ರದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ವಿಳಂಬವಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೊಡುವ ರೀತಿಯಲ್ಲಿ ಒಪಿಎಸ್‌ ಯಥಾವತ್ತಾಗಿ ಜಾರಿಗೊಳಿಸಬೇಕು. ಈ ಹಿಂದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾದಾಮಿ ತಾಲೂಕಿನ ಗುಳೇದಗುಡ್ಡದ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ ಅವರ ಮನೆಗೆ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕುಟುಂಬಕ್ಕೆ ವೈಯುಕ್ತಿಕವಾಗಿ ಎರಡು ಲಕ್ಷ ರು. ನೀಡಿದ್ದಲ್ಲದೇ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅನುದಾನರಹಿತ ಅವಧಿಯನ್ನು ಪರಿಗಣಿಸಿ, ಪಿಂಚಣಿ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದ್ದನ್ನು ಸ್ಮರಿಸಿದ್ದಾರೆ.

ಮನವಿಯನ್ನು ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ ಪ್ರವೀಣ ಸ್ವೀಕರಿಸಿದರು. ಸಂಘದ ಗೌರವಾಧ್ಯಕ್ಷ ಉದಯ ನಾಯ್ಕ, ಅಧ್ಯಕ್ಷ ಕೆ.ಬಿ. ಮಡಿವಾಳ, ಉಪಾಧ್ಯಕ್ಷ ಶ್ರೀಕಾಂತ ಭಟ್ಟ, ಪ್ರಧಾನ ಕಾರ್ಯದರ್ಶಿ ಅರುಣ, ವಿನಾಯಕ ಭಟ್ಟ, ಪ್ರಹ್ಲಾದ ನಾಯ್ಕ, ರಾಜಾ ಸಾಬ, ಲೀಲಾವತಿ ಮೊಗೇರ, ಇಮ್ರಾನ್ ಮುಲ್ಲಾ, ಶಾಂತಲಾ ನಾಯ್ಕ, ಗಣಪತಿ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

ವಿವಿಧ ಬೇಡಿಕೆ ಈಡೇರಿಕೆಗೆ ಪಿಂಚಣಿ ವಂಚಿತ ನೌಕರರ ಸಂಘ ಮನವಿ

ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರ ಸಂಘ ಹಾಗೂ ವಿವಿಧ ಶಾಲಾ ಶಿಕ್ಷಕರು ಶನಿವಾರ ಮುಂಡಗೋಡ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು.

ಸಂಘಟನಾ ಕಾರ್ಯದರ್ಶಿ ವಿನಾಯಕ ಶೇಟ್, ಪ್ರಧಾನ ಕಾರ್ಯದರ್ಶಿ ಎಂ.ಎಸ್. ಪಾಟೀಲ, ರಾಜ್ಯ ಕಮಿಟಿ ಸದಸ್ಯ ಎಸ್.ಡಿ. ಮುಡೆಣ್ಣವರ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಜು ನದಾಫ್‌, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಗೌರವಾಧ್ಯಕ್ಷ ಸುಭಾಸ ಡೋರಿ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಸಿ. ಬಸನಗೌಡರ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ.ವಿ. ಮಲ್ಲನಗೌಡರ, ತಾಲೂಕು ದಲಿತ ನೌಕರ ಸಂಘದ ಅಧ್ಯಕ್ಷ ಪಿ. ನಾಗೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ ಅಂಬಿಗೇರ, ಕೃಷ್ಣ ಗುಜಮಾಗಡಿ, ಅರುಣಕುಮಾರ ಬುದ್ದಿನಿ, ವೈ.ಎನ್. ಸವದತ್ತಿ, ಎಸ್.ಎ. ದೊಡ್ಮನಿ, ಕೊಂಡೋಜಿ ಮುಂತಾದವರು ಉಪಸ್ಥಿತರಿದ್ದರು.