ಕೊಡಗಿನಲ್ಲಿ ಮುಂದುವರೆದ ಮಳೆ

| Published : May 21 2024, 12:44 AM IST / Updated: May 21 2024, 02:25 PM IST

ಸಾರಾಂಶ

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 17. 21 ಮಿ.ಮೀ. ಮಳೆಯಾಗಿದೆ.

 ಮಡಿಕೇರಿ :  ಕೊಡಗು ಜಿಲ್ಲೆಯಲ್ಲಿ ಸೋಮವಾರ ಕೂಡ ಉತ್ತಮ ಮಳೆಯಾಗಿದ್ದು, ಜಿಲ್ಲೆಯಾದ್ಯಂತ ಮಳೆಗಾಲದ ವಾತಾವರಣ ಕಂಡುಬಂತು.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಕೆಲ ಕಾಲ ಉತ್ತಮ ಮಳೆಯಾಯಿತು. ಮತ್ತೆ ಸ್ವಲ್ಪ ಸಮಯ ಬಿಡುವು ನೀಡಿ ಸಂಜೆ ಮತ್ತೆ ಮಳೆ ಸುರಿಯಿತು.

ಉಳಿದಂತೆ ಜಿಲ್ಲೆಯ ವಿರಾಜಪೇಟೆ, ಸುಂಟಿಕೊಪ್ಪ, ಪೊನ್ನಂಪೇಟೆ, ಬಿಟ್ಟಂಗಾಲ, ಗೋಣಿಕೊಪ್ಪ, ಚೆಟ್ಟಳ್ಳಿ ಸೇರಿದಂತೆ ಹಲವು ಕಡೆಯಲ್ಲಿ ಮಳೆ ಸುರಿಯಿತು.

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 122.89 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ 35.25 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ಮಳೆ 8.40 ಮಿ.ಮೀ. ಮಳೆಯಾಗಿದೆ. ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ ಮಳೆ 23.40 ಮಿ.ಮೀ. ಮಳೆಯಾಗಿದೆ, ಸೋಮವಾರಪೇಟೆ ತಾಲೂಕಿನಲ್ಲಿ 12.30 ಮಿ.ಮೀ. ಮಳೆಯಾಗಿದೆ ಹಾಗೂ ಕುಶಾಲನಗರ ತಾಲೂಕಿನಲ್ಲಿ 6.70 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 5.20, ನಾಪೋಕ್ಲು 9.20, ಸಂಪಾಜೆ 71, ಭಾಗಮಂಡಲ 55.60, ವಿರಾಜಪೇಟೆ ಕಸಬಾ 6.80, ಅಮ್ಮತ್ತಿ 10, ಹುದಿಕೇರಿ 1.30, ಶ್ರೀಮಂಗಲ 0.20, ಪೊನ್ನಂಪೇಟೆ 2, ಬಾಳೆಲೆ 90.10, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 11.20, ಶಾಂತಳ್ಳಿ 17.40, ಕೊಡ್ಲಿಪೇಟೆ 14, ಕುಶಾಲನಗರ 8.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.