ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳು ಭಯದಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ ನೇಹಾ ಹಿರೇಮಠ, ಉತ್ತರ ಕನ್ನಡದ ದಲಿತ ಯುವತಿಯ ಮೇಲೆ ನಡೆದ ದೌರ್ಜನ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದು ವಿಜಯೇಂದ್ರ ಹೇಳಿದರು.
ಹುಬ್ಬಳ್ಳಿ: ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಜನರನ್ನು ಹಾದಿ ತಪ್ಪಿಸಿರುವ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ನಿರಂತರ ಹೋರಾಟ ನಡೆಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನೆಹರು ಮೈದಾನದಲ್ಲಿ ನಡೆದ ಬಿಜೆಪಿ ಜನಾಕ್ರೋಶ ಪ್ರತಿಭಟನಾ ಸಭೆ
ನಗರದ ನೆಹರು ಮೈದಾನದಲ್ಲಿ ಶುಕ್ರವಾರ ನಡೆದ ಬಿಜೆಪಿ ಜನಾಕ್ರೋಶ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರು, ಹೆಣ್ಣು ಮಕ್ಕಳು ಭಯದಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ ನೇಹಾ ಹಿರೇಮಠ, ಉತ್ತರ ಕನ್ನಡದ ದಲಿತ ಯುವತಿಯ ಮೇಲೆ ನಡೆದ ದೌರ್ಜನ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ ಎಂದರು.
ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಪ್ರತಿನಿತ್ಯ ಕೊಲೆ, ಸುಲಿಗೆ, ಲವ್ ಜಿಹಾದ್, ನಡೆಯುತ್ತಲೇ ಇವೆ. ರಾಜ್ಯದಲ್ಲಿ ಕೊಲೆ ಸುಲಿಗೆ ಪ್ರತಿ ದಿನ ಲವ್ ಜಿಹಾದ್, ಮಹಿಳಾ ಹತ್ಯೆಗಳು ನಡೆಯುತ್ತಿವೆ. ನಮ್ಮ ಮಹಿಳೆಯರು ಜೈಪುರ, ಮುಂಬೈಗೆ ಹೋಗುತ್ತಿದ್ದಾರೆ.
ನಮ್ಮ ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಕೆಲಸಕ್ಕೆ ಹೋದರೆ ಸಂಜೆ ಮನೆಗೆ ಬರುವ ಭರವಸೆ ಇಲ್ಲ. ರಾಜ್ಯದಲ್ಲಿ ಅನೀತಿ, ಅತ್ಯಾಚಾರ ನಿಲ್ಲಬೇಕಾದರೆ ನಮ್ಮ ರಕ್ಷಣೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ನಮಗೆ ಅಧಿಕಾರ ಕೊಡಿ, ವಿಧಾನಸಭೆ, ಲೋಕಸಭೆಯಲ್ಲಿ ಸ್ಥಾನ ಕೊಡಿ ಎಂದು ನಾರಿ ಶಕ್ತಿ ಕೂಗಿ ಕೂಗಿ ಹೇಳುತ್ತಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ವಿಪಕ್ಷಗಳು ಮಹಿಳಾ ವಿಧೇಯಕವನ್ನು ಸೋಲಿಸುವ ಮೂಲಕ ತಮ್ಮ ಮಹಿಳಾ ವಿರೋಧಿ ನೀತಿಯನ್ನು ಸಾಬೀತು ಮಾಡಿವೆ. ಮುಂಬರುವ ದಿನಗಳಲ್ಲಿ ಇಂತಹ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು.

