ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಳೂರುಶೆಟ್ಟಳ್ಳಿ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ಚೆರಿಯಾ ಮನೆ ದಿ. ಕೃಷ್ಣ ಮತ್ತು ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮ ತೋಳೂರು ಶೆಟ್ಟಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆಯಿತು.
ಸೋಮವಾರಪೇಟೆ; ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಳೂರುಶೆಟ್ಟಳ್ಳಿ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ಚೆರಿಯಾ ಮನೆ ದಿ. ಕೃಷ್ಣ ಮತ್ತು ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮ ತೋಳೂರು ಶೆಟ್ಟಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಈಗಾಗಲೇ 60ಕ್ಕೂ ಹೆಚ್ಚು ನಿಧಿಗಳನ್ನು ಹೊಂದಿದ್ದು ಕೊಡಗು ಜಿಲ್ಲೆಯಾದ್ಯಂತ ಕಾರ್ಯಕ್ರಮ ಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.ಜಾನಪದ ಸಾಹಿತ್ಯ ಬಗ್ಗೆ ಉಪನ್ಯಾಸ ನೀಡಿದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಜಲಕಾಳಪ್ಪ ಮಾತನಾಡಿ, ಭಾರತ ದೇಶದಲ್ಲಿ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ, ಕಲೆ, ಸಾಹಿತ್ಯ, ನೃತ್ಯ, ನಾಟಕ, ಯಕ್ಷಗಾನ, ಬಯಲಾಟ, ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದೆಂದರು.
ಉಪನ್ಯಾಸಕ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಶಾಫಿ ಸ ಅಸದಿ ಕೊಡಗಿನ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಬೆಳವಣಿಗೆ ವಿಷಯದಲ್ಲಿ ಮಂಡನೆ ಮಾಡಿ, ಜಿಲ್ಲೆಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ವಿಶಿಷ್ಟ ವಾಗಿದ್ದು, ಕರ್ನಾಟಕದ ಅತ್ಯಂತ ಸಮೃದ್ಧ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್. ಡಿ. ವಿಜೇತ್ ಅಧ್ಯಕ್ಷತೆ ವಹಿಸಿದ್ದರು. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ, ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ್, ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎ.ಪಿ. ವೀರರಾಜ್, ಶ್ರೀಧರ್ ಹೂವಲ್ಲಿ ಇದ್ದರು.2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ ಅಂಬೇಡ್ಕರ್ ವಸತಿ ಶಾಲೆಯ ಪುಣ್ಯ ಅವರನ್ನು ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.