ಸಾರಾಂಶ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಾಕಿ ಇರುವ ಬಿಲ್ ಪಾವತಿ ಮಾಡಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇನ್ನಷ್ಟು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಜತೆಗೆ ಸರ್ಕಾರದ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಧಾರವಾಡ:
ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಸದಸ್ಯರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗುತ್ತಿಗೆದಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ₹ 25 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಇದರಿಂದ ಗುತ್ತಿಗೆದಾರರು ಮತ್ತು ಅವರ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಗುತ್ತಿಗೆದಾರರು ಆರ್ಥಿಕ ತೊಂದರೆಯಿಂದ ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಬಾಕಿ ಇರುವ ಬಿಲ್ ಪಾವತಿ ಮಾಡಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇನ್ನಷ್ಟು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ. ಜತೆಗೆ ಸರ್ಕಾರದ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಸಂಘದ ಅಧ್ಯಕ್ಷ ಸುಭಾಸ ಪಾಟೀಲ, ದೊಡ್ಡಬಸನಗೌಡ ರೆಡ್ಡಿ, ಕಾರ್ಯದರ್ಶಿ ರವೀಂದ್ರ ಮಾನೆ, ಸುಧಾಕರ ರೆಡ್ಡಿ, ನಾಗಪ್ಪ ಅಷ್ಟಗಿ, ವಿ.ಎಸ್. ಪಾಟೀಲ, ಎಚ್.ಆರ್. ಚಿಂಚಲಿ, ಬಿ.ಎಂ. ಪಾಟೀಲ, ಎಂ.ಎಸ್. ನಾಡಗೌಡರ ಸೇರಿದಂತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳ ಗುತ್ತಿಗೆದಾರರು ಭಾಗವಹಿಸಿದ್ದರು.