ಈ ಲಸಿಕೆ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಹಾಗೂ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ. ಪ್ರತಿಯೊಬ್ಬ ಅರ್ಹ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತವಾದಿದೆ
ಅಭಿಯಾನಕ್ಕೆ ಚಾಲನೆ ನೀಡಿದ ವೈದ್ಯಾಧಿಕಾರಿ ಡಾ.ಚೇತನ್ ಸಲಹೆ
ಕನ್ನಡಪ್ರಭ ವಾರ್ತೆ ದಾಬಸ್ಪೇಟೆಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ-ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷವಾಕ್ಯದೊಂದಿಗೆ 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆಯನ್ನು ಹಾಕಿಸುವುದರ ಮೂಲಕ ಗರ್ಭಕಂಠ ಕ್ಯಾನ್ಸರ್ ಮುಕ್ತ ಸಮಾಜಕ್ಕೆ ಸಹಕಾರ ನೀಡಬೇಕು ಎಂದು ವೈದ್ಯಾಧಿಕಾರಿ ಡಾ.ಚೇತನ್ ಹೇಳಿದರು.
ಸೋಂಪುರ ಹೋಬಳಿ ಶಿವಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಎಚ್.ಪಿ.ವಿ) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಲಸಿಕೆ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಹಾಗೂ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ. ಪ್ರತಿಯೊಬ್ಬ ಅರ್ಹ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತವಾಗಿದ್ದು, ಜಿಲ್ಲಾ ಆಡಳಿತದ ಪರವಾಗಿ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಾನಂದಕುಮಾರ್ ಮಾತನಾಡಿ, ಎಚ್‌ಪಿವಿ ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ ಎಂಬ ವೈರಸ್ ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಕಾಯಿಲೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಗುದ ಮತ್ತು ಗಂಟಲು ಕ್ಯಾನ್ಸರ್ ಎಂಬ ವಿವಿಧ ಭಾಗದ ಕ್ಯಾನ್ಸರ್ ಗಳಿದ್ದು ಎಚ್.ಪಿವಿ ಲಸಿಕೆಯಿಂದ ತಡೆಗಟ್ಟಬಹುದಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಮಧುಸೂಧನ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ವಿಶಾಲಾಕ್ಷಮ್ಮಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ರಾಧ, ಶಕುಂತಲಾ, ವೀಣಮ್ಮ, ಪ್ರಯೋಗಾಲಯ ತಂತ್ರಜ್ಞೆ ಜಮುನಾ, ಸಿಬ್ಬಂದಿ ವರ್ಗದವರಾದ ಮಂಜುಳ, ಲಕ್ಷ್ಮೀದೇವಿ ಮತ್ತಿತರರಿದ್ದರು.----------------
ಸೋಂಪುರ ಹೋಬಳಿ ಶಿವಗಂಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಎಚ್‌ಪಿವಿ) ಲಸಿಕೆ ನೀಡಲಾಯಿತು.