ಸಾರಾಂಶ
ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ.
ಮೂಡಲಗಿ : ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಘಟಪ್ರಭಾ ಪೊಲೀಸ್ ಠಾಣೆಯ ಪಿಎಸೈ ಹನುಮಂತ ನೇರಳೆ ಹೇಳಿದರು.
ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಘಟಪ್ರಭಾ ಪೊಲೀಸ್ ಠಾಣೆ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆ ಹಾಗೂ ಲೈಂಗಿಕ ಕಿರುಕುಳ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರೊ. ಡಿ.ಎಸ್.ಹುಗ್ಗಿ ಮಾತನಾಡಿ, ವಿಶ್ವದಾದ್ಯಂತ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದರು.
ಉಪನ್ಯಾಸಕರಾದ ಡಾ.ಎಂ.ಬಿ.ಕುಲಮೂರ, ಡಾ.ಕೆ.ಎಸ್.ಪರವ್ವಗೋಳ, ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಶಂಕರ ಎಂ.ನಿಂಗನೂರ, ವಸುಂದರಾ ಕಾಳೆ, ಬಿ.ಕೆ.ಸೊಂಟನವರ, ಕಾಲೇಜಿನ ಲೈಂಗಿಕ ಕಿರುಕುಳ ತಡೆ ಸಮಿತಿಯ ಸಂಯೋಜಕ ಬಿ.ಸಿ.ಮಾಳಿ, ವಿಲಾಸ ಕೆಳಗಡೆ, ಸಂತೋಷ ಜೋಡಕುರಳಿ ಇನ್ನಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))