ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಎಲ್ಲ ವರ್ಗದ ಸಾರ್ವಜನಿಕರು ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅರ್ಥಪೂರ್ಣವಾಗಿ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದರು.ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀದರ್‌ನಿಂದ ಚಾಮರಾಜನಗರಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 8.30 ರಿಂದ 9.30ರ ಸಮಯದಲ್ಲಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಆಚರಣೆ ಮಾಡಲು ಸರ್ಕಾರದ ನಿರ್ದೇಶನವಿದೆ. 2500 ಕಿಲೋ ಮೀಟರ್ ನ ಉದ್ದ 25 ಲಕ್ಷ ಜನರನ್ನು ಒಳಗೊಂಡ ಎಲ್ಲ ವರ್ಗದವರು ಭಾಗವಹಿಸಲಿದ್ದಾರೆ, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯ ಭಾಗಕ್ಕೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಡಕು ಹೊಸಹಳ್ಳಿ ಗ್ರಾಮದಿಂದ ಆರಂಭಗೊಂಡು ಕೋಲಾರ ಜಿಲ್ಲೆಯ ಗಡಿಯ ಭಾಗವಾದ ಹೆಚ್ ಕ್ರಾಸ್ ಬಳಿ ಚಿಕ್ಕಗೊಂಡಹಳ್ಳಿಯ ವರಗೆ ಜಿಲ್ಲೆಯಲ್ಲಿ 47 ಕಿಲೋ ಮೀಟರ್ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದ ಮುಂಭಾಗದ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮಹತ್ವ ಬಗ್ಗೆ ವಿಷಯ ತಜ್ಞರಿಂದ ಭಾಷಣದ ಮೂಲಕ ತಿಳಿಸಲಾಗುತ್ತದೆ. ಪ್ರತಿ ಒಂದು ಕೀಲೋ ಮೀಟರ್ ಗೆ 800 ಜನಗಳಿಂದ ಮಾನವ ಸರಪಳಿ ನಿರ್ಮಿಸಲು ಸಿದ್ಧತೆ ಕೈಗೊಳ್ಳಲು ಪ್ರಭಾರ ವಹಿಸಿ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು, ಮಜ್ಜಿಗೆ, ಪೊಲೀಸ್ ಬಂದೋಬಸ್ತ್, ಅರೋಗ್ಯ ಸೇವೆ, ಅಬುಂಲೆನ್ಸ್ ನಿಲುಗಡೆ, ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಹಾಗೂ ಮೂಲಭೂತ ಸೌರ್ಕಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.ನಾಗರಿಕರು ಕೈಜೋಡಿಸಲು ಮನವಿ ಜನಪ್ರತಿನಿದಿನಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಪದಾಧಿಕಾರಿಗಳೆಲ್ಲರ ಸಹಕಾರ ಪಡೆದು ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯ, ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ನಾಗರೀಕರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಯಶಸ್ಸುಗೊಳಿಸಲು ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಎಸ್ಪಿ ರಾಜಾ ಇಮಾಮ್ ಖಾಸಿಂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬೈಲಾಂಜಿನಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಆಡಳಿತ ಸಂಸ್ಥೆಗಳ ಜನಪ್ರತಿನಿದಿನಗಳು, ಎಲ್ಲ ಗ್ರಾಪಂ ಅಧ್ಯಕ್ಷರು, ಉಪ ಅಧ್ಯಕ್ಷರು ಮತ್ತು ಸದ್ಯಸರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.