ಗುಣಮಟ್ಟದ ಹಾಲು ಹಾಕಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ವಿ.ಎಂ.ವಿಶ್ವನಾಥ್

| Published : Jun 29 2024, 12:33 AM IST

ಗುಣಮಟ್ಟದ ಹಾಲು ಹಾಕಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ವಿ.ಎಂ.ವಿಶ್ವನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ಡೇರಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಉತ್ಪಾದಕರು ಸಂಘದ ಅಭಿವೃದ್ಧಿ ಜೊತೆಗೆ ನಿಮ್ಮ ಆರ್ಥಿಕ ಸಮಸ್ಯೆ ನಿವಾರಣೆಗೆ ಸಹಕರಿಸಬೇಕು. ಇಲ್ಲಿನ ಡೇರಿ ಉತ್ತಮ ಲಾಭದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಾಭ ಬರಲು ಸಹಕಾರ ಬಹು ಮುಖ್ಯ.

ಕನ್ನಡಪ್ರಭ ವಾರ್ತೆ ಹಲಗೂರು

ಡೇರಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಉತ್ಪಾದಕರು ಸಂಘದ ಅಭಿವೃದ್ಧಿ ಜೊತೆಗೆ ನಿಮ್ಮ ಆರ್ಥಿಕ ಸಮಸ್ಯೆ ನಿವಾರಣೆಗೆ ಸಹಕರಿಸಬೇಕು ಎಂದು ಮನ್ಮುಲ್ ಮತ್ತು ಕೆಎಂಎಫ್ ನಿರ್ದೇಶಕ ವಿ.ಎಂ.ವಿಶ್ವನಾಥ್ ತಿಳಿಸಿದರು.

ಲಿಂಗಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಇಲ್ಲಿನ ಡೇರಿ ಉತ್ತಮ ಲಾಭದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಾಭ ಬರಲು ಸಹಕಾರ ಬಹು ಮುಖ್ಯ ಎಂದರು.

ಸಂಘದಲ್ಲಿ ಕಾರ್ಯದರ್ಶಿಯಾಗಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಿದ್ದೇಗೌಡರನ್ನು ಮುಂದಿನ ದಿನಗಳಲ್ಲಿ ಮಳವಳ್ಳಿ ಪಟ್ಟಣದಲ್ಲಿ ಸನ್ಮಾನಿಸಲಾಗುತ್ತದೆ ಎಂದರು.

ಇದೇ ವೇಳೆ ಸಿದ್ದೇಗೌಡರನ್ನು ಮೈಸೂರು ಪೇಟ ತೊಡಿಸಿ ಶಾಲು ಹಾಕಿ ಸನ್ಮಾನಿಸಲಾಯಿತು. ಡೇರಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ವೇಳೆ ಡೇರಿ ಅಧ್ಯಕ್ಷ ರವಿಚಂದ್ರ, ಉಪಾಧ್ಯಕ್ಷ ಚಿಕ್ಕ ಹುಚ್ಚ ಹೆಗ್ಗಡೆ, ನೂತನ್ ಕುಮಾರ್, ರೇಖಾ, ಪ್ರಭಾರ ಮುಖ್ಯ ಕಾರ್ಯದರ್ಶಿ ಕೃಷ್ಣೇಗೌಡ, ಶಿವನಂಜು, ಗಂಗಾಧರ, ಕಾಳಪ್ಪ,ಹಾಗೂ ಸಂಘದ ಸರ್ವ ಸದಸ್ಯರು ಹಾಗೂ ಎಲ್ಲಾ ನಿರ್ದೇಶಕರು ಇದ್ದರು.

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗಾಗಿ

ಇಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಮಂಡ್ಯ:ಜಿಲ್ಲೆಯ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೂ.29ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಜನತಾ ಪಕ್ಷ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅಶೋಕ್ ಜಯರಾಮ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದರು.ಕಳೆದ ಬಜೆಟ್‌ನಲ್ಲಿ ಪ್ರೋತ್ಸಾಹ ಧನಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಪಶುಪಾಲನ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸರ್ಕಾರ ಬಳಕೆ ಮಾಡಿಕೊಂಡಿದೆ. ಹಾಲು ಉತ್ಪಾದಕರಿಗೆ ನೀಡದೆ ವಿಳಂಬ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು .

ತಕ್ಷಣವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವಾಪಸ್ ಪಡೆಯಬೇಕು. ವಿಸಿ ನಾಲೆಗಳಿಗೆ ನೀರು ವಿತರಿಸುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಶ್ರೀಧರ್, ನಾಗರಾಜು, ಲಿಂಗರಾಜು, ಜವರೇಗೌಡ ,ವೈರಮುಡಿ ,ವಿನಯ್ ಉಪಸ್ಥಿತರಿದ್ದರು.