ಹೊಸಕೋಟೆ: ರಾಜ್ಯದಲ್ಲಿ ಸಹಕಾರ ಸಂಘಗಳು ಸರ್ಕಾರ ಕೆಲಸ ಮಾಡುವ ರೀತಿಯಲ್ಲಿಯೇ ಸಾಮಾಜಿಕ ವಲಯದ ಅಭಿವೃದ್ಧಿ ದೃಷ್ಟಿಯಿಂದ ಗುರುತರ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು
ಹೊಸಕೋಟೆ: ರಾಜ್ಯದಲ್ಲಿ ಸಹಕಾರ ಸಂಘಗಳು ಸರ್ಕಾರ ಕೆಲಸ ಮಾಡುವ ರೀತಿಯಲ್ಲಿಯೇ ಸಾಮಾಜಿಕ ವಲಯದ ಅಭಿವೃದ್ಧಿ ದೃಷ್ಟಿಯಿಂದ ಗುರುತರ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದಲ್ಲಿ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್‌ನ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ 113 ವರ್ಷಗಳ ಹಿಂದೆ ಪ್ರಾರಂಭವಾದ ಟೌನ್ ಕೋ ಆಪರೇಟಿವ್ ಬ್ಯಾಂಕ್ ಷೇರುದಾರರ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾರಂಭವಾದ ಮೊದಲ ಬ್ಯಾಂಕ್ ಎಂದು ಪ್ರಶಸ್ತಿ ಗಳಿಸಿದೆ. ಬ್ಯಾಂಕಿನಲ್ಲಿ 17000 ಷೇರುದಾರರಿದ್ದು ಪೇರುದಾರರ ಹಿತ ಕಾಪಾಡುವುದು ಆಡಳಿತ ಮಂಡಳಿಯ ಜವಾಬ್ದಾರಿ. ನೂತನ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದಿದೆ. ರಾಜಕೀಯವನ್ನು ಬದಿಗೊತ್ತಿ ಒಗ್ಗಟ್ಟಾಗಿ ಬ್ಯಾಂಕಿನ ಅಭಿವೃದ್ಧಿಗೆ ಮುಂದಡಿ ಇಡಬೇಕು. ಯುಪಿಐ, ಎನ್‌ಇಎಫ್‌ಟಿನಡಿ ವಹಿವಾಟಿಗೆ ಅವಕಾಶ ಮಾಡಿಕೊಟ್ಟರೆ ಬ್ಯಾಂಕ್ ಮತ್ತಷ್ಟು ಲಾಭಗಳಿಸಲು ಸಾಧ್ಯ. ಆಡಳಿತ ಮಂಡಳಿ ಚಿಂತನೆ ನಡೆಸಬೇಕು ಎಂದರು.ಟೌನ್ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, 113 ವರ್ಷಗಳ ಇತಿಹಾಸ ಹೊಂದಿರುವ ಟೌನ್ ಬ್ಯಾಂಕ್ ಲಾಭಾಂಶದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದೆ. ಬ್ಯಾಂಕಿನ ಅಭಿವೃದ್ಧಿಗೆ ಗ್ರಾಹಕರ ಸಹಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿಯನ್ನು ನಮ್ಮ ಟೌನ್ ಬ್ಯಾಂಕಿನಲ್ಲಿಯೇ ಇಟ್ಟು ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಿ ಎಂದರು.
ಟೌನ್ ಕಾಂಗ್ರೆಸ್ ಅಧ್ಯಕ್ಷ ಬಿವಿ.ಭೈರೇಗೌಡ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಎಚ್.ಎಂ.ಸುಬ್ಬರಾಜು, ಮಾಜಿ ಅಧ್ಯಕ್ಷರಾದ ಡಾ.ಸಿ.ಜಯರಾಜ್, ವಿಜಯ್‌ಕುಮಾರ್, ಟೌನ್ ಬ್ಯಾಂಕ್ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಬೈರಿಜಾನ್, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ನಾಗರಾಜ್ ನಿರ್ದೇಶಕರು ಹಾಜರಿದ್ದರು.ಫೋಟೋ : 3 ಹೆಚ್ ಎಸ್ ಕೆ 2
ಹೊಸಕೋಟೆಯಲ್ಲಿ ಟೌನ್ ಬ್ಯಾಂಕಿನ ಷೇರುದಾರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿದರು.