ಸಾಮೂಹಿಕ ವಿವಾಹದ ಯಶಸ್ಸಿಗೆ ಸಹಕಾರ ನೀಡಿ: ಶಾಸಕ ಎಂ.ಆರ್. ಮಂಜುನಾಥ್

| Published : Aug 20 2024, 12:58 AM IST

ಸಾಮೂಹಿಕ ವಿವಾಹದ ಯಶಸ್ಸಿಗೆ ಸಹಕಾರ ನೀಡಿ: ಶಾಸಕ ಎಂ.ಆರ್. ಮಂಜುನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.21ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಎಲ್ಲರೂ ಸಹಕಾರ ನೀಡಬೇಕೆಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಗಳ ಸಭೆ । ಮಲೆ ಮಹದೇಶ್ವರ ಬೆಟ್ಟದಲ್ಲಿ ವಿವಾಹ ಕಾರ್ಯಕ್ರಮ । ವಧು-ವರರಿಗೆ ಅಗತ್ಯ ಸೌಲಭ್ಯ

ಕನ್ನಡಪ್ರಭ ವಾರ್ತೆ ಹನೂರು

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.21ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಎಲ್ಲರೂ ಸಹಕಾರ ನೀಡಬೇಕೆಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಆ.21ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಎಲ್ಲರೂ ಸಹಕಾರ ನೀಡಬೇಕೆಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ವರ್ಷವೂ ಸಾಮೂಹಿಕ ವಿವಾಹ ಕಾರ್ಯಕ್ರಮವು ನಡೆಯುತ್ತಿದ್ದು ಸಂಪ್ರದಾಯದಂತೆ ವಿಧಿ ವಿಧಾನಗಳೊಂದಿಗೆ ಈ ಬಾರಿಯೂ ಸಾಮೂಹಿಕ ವಿವಾಹ ಯಶಸ್ವಿಯಾಗಿ ನೆರವೇರಬೇಕು, ಸಾಮೂಹಿಕ ವಿವಾಹಕ್ಕೆ ಬರುವ ವಧು ಹಾಗೂ ವಧುವಿನ ಕಡೆಯವರಿಗೆ ಶ್ರೀ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕೊಡಬೇಕು ಎಂದು ತಿಳಿಸಿದರು.

ಆ.21ರಂದು ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 63 ಜೋಡಿಗಳು ಅಂತಿಮವಾಗಿ ನೋಂದಣಿ ಮಾಡಿಕೊಂಡಿದ್ದು ಆ.21ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಧುವಿಗೆ ನಾಲ್ಕು ಗ್ರಾಂ ಚಿನ್ನದ ತಾಳಿ, ಸೀರೆ, ಕಾಲುಂಗುರ, ವರನಿಗೆ ಪಂಚೆ, ಶರ್ಟ್, ಶಲ್ಯ ವಿತರಣೆ ಮಾಡಲಿದ್ದೇವೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಶಾಸಕರ ಗಮನಕ್ಕೆ ತಂದರು. ಈ ವೇಳೆ ವಧು ವರರಿಗೆ ನೀಡುವ ಬಟ್ಟೆಗಳನ್ನು ಶಾಸಕ ಎಂ.ಆರ್. ಮಂಜುನಾಥ್ ಪರಿಶೀಲಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, ಆ. 21ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವಾಹದ ಕಾರ್ಯಕ್ರಮದ ಸಿದ್ಧತೆಗೆ ಈಗಾಗಲೇ ಸಿಬ್ಬಂದಿ ನೇಮಕ ಮಾಡಲಾಗಿದೆ. ಪ್ರತಿಯೊಬ್ಬ ಅಧಿಕಾರಿಯೂ ತಮಗೆ ನೀಡಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಕಾರ್ಯಕ್ರಮವನ್ನು ಯಶಸ್ವಿ ಮಾಡಲು ಶ್ರಮವಹಿಸಬೇಕು ಎಂದು ತಿಳಿಸಿದರು.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಂದು ಮೆಗಾವ್ಯಾಟ್ ಸೋಲಾರ್ ಪವರ್ ಸ್ಟೇಷನ್, ದೊಡ್ಡಕೆರೆ ಮೈದಾನ, ಮ್ಯೂಸಿಯಂ, 27 ಕೋಟಿ ರು. ವೆಚ್ಚದ ಯುಜಿಡಿ ಕಾಮಗಾರಿಗಳು ಉದ್ಘಾಟನೆ ಆಗಬೇಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸದೆ ಇರುವುದರಿಂದ ಯಾವುದೇ ಉದ್ಘಾಟನಾ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಕೇವಲ ಸಾಮೂಹಿಕ ವಿವಾಹ ಮಾತ್ರ ನೆರವೇರಲಿದೆ ಎಂದರು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮಿಸುತ್ತಿಲ್ಲ, ಉಳಿದಂತೆ ದಸರಾ ಮಹೋತ್ಸವಕ್ಕೆ ಗಜಪಡೆ ಆಗಮಿಸುತ್ತಿರುವ ಹಿನ್ನೆಲೆ ಎಚ್.ಸಿ.ಮಹದೇವಪ್ಪ ವೀರನ ಹೊಸಳ್ಳಿಗೆ ತೆರಳಿದ್ದಾರೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡಲು ಸೂಚಿಸಿದ್ದರು. ಆದರೆ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದರಿಂದ ಅವರು ಸಹ ಬರುವುದು ಅನುಮಾನ ಎಂದರು.

ಉಪ ಕಾರ್ಯದರ್ಶಿ ಚಂದ್ರಶೇಖರ್ , ದೇವಾಲಯದ ಆಗಮಿಕರಾದ ಕರವೀರ ಸ್ವಾಮಿ, ಪ್ರಸಾದ್, ಬೇಡಗಂಪಣ ಸಮುದಾಯದ ಹಿರಿಯ ಅರ್ಚಕ ಕೆ.ವಿ. ಮಾದೇಶ್, ಇನ್‌ಸ್ಪೆಕ್ಟರ್ ಜಗದೀಶ್, ಸಿಬ್ಬಂದಿ ಸರಗೂರು ಮಹದೇವಸ್ವಾಮಿ, ಜನಾರ್ಧನ್, ದಾಸೋಹ ಉಸ್ತುವಾರಿ ಸ್ವಾಮಿ, ಪಾರು ಪತ್ತೆದಾರ ಮಹಾಲಿಂಗನ ಕಟ್ಟೆ ಮಹದೇವಸ್ವಾಮಿ, ಮಲ್ಲಿಕಾರ್ಜುನ್ ನಾಗರಾಜು, ಎಇಇ ಚಿನ್ನಣ್ಣ, ಮಹೇಶ್ ಹಾಜರಿದ್ದರು.