ಶೈಕ್ಷಣಿಕ ಪ್ರಗತಿಗೆ ಬ್ಯಾಂಕ್‌ಗಳ ಕೊಡುಗೆ ಅಪಾರ

| Published : Dec 20 2023, 01:15 AM IST

ಸಾರಾಂಶ

ಶೈಕ್ಷಣಿಕ ಪ್ರಗತಿಗೆ ಬ್ಯಾಂಕ್‌ಗಳ ಕೊಡುಗೆ ಅಪಾರ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರ ಮೂಲಕ ಬ್ಯಾಂಕ್‌ಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ವೀರಣ್ಣ.ಚರಂತಿಮಠ ಹೇಳಿದರು.

ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಇಂಡಿಯನ್ ಓವರ್‌ಸೀಸ್‌ ಬ್ಯಾಂಕಿನ ಹೊಸ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಸಮಾಜದ ಮುನ್ನೆಲೆಗೆ ತರುತ್ತಿರುವ ಬ್ಯಾಂಕ್‌ಗಳ ಕಾರ್ಯ ಶ್ಲಾಘನೀಯ. ಈ ಶಾಖೆ ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಬೀಳೂರು ಕಾಲೋನಿಯ ನಿವಾಸಿಗಳಿಗೆ ಮತ್ತು ಎಪಿಎಂಸಿ ಸುತ್ತಲಿನ ವ್ಯಾಪಾರಸ್ಥರಿಗೆ ಇದರಿಂದ ಪ್ರಯೋಜನವಾಗಲಿದೆ ಎಂದರು.

ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಬ್ಯಾಂಕ್‌ ಹೊಸ ಶಾಖೆ ಸ್ಥಾಪಿಸಿರುವ ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್ನ ಆಡಳಿತ ಮಂಡಳಿಗೆ ಮತ್ತು ಅಧಿಕಾರಿಗಳಿಗೆ ಕೃತಜ್ಞತೆಗಳು. ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿದ್ದು ಎಲ್ಲರೂ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್‌ ಎಂ.ಡಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಜಯಕುಮಾರ ಶ್ರೀವಾತ್ಸವ ಮಾತನಾಡಿ, ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಮತಿಮಠವರ ಪ್ರಾಮಾಣಿಕ ಸಮಾಜ ಸೇವೆ ಬಗ್ಗೆ ತುಂಬಾ ಕೇಳಿದ್ದೇನೆ. ಇಂದು ಅವರನ್ನು ಕಂಡಾಗ ಅವರ ಸರಳತೆ ಭಾವ ಮೆಚ್ಚುಗೆಯಾಯತು, ಇಂಡಿಯನ್ ಓವರ್‌ಸೀಸ್‌ ಬ್ಯಾಂಕ್ ಹಾಗೂ ಬಿ.ವಿ.ವಿ ಸಂಘಕ್ಕೂ ಬಹಳ ವರ್ಷಗಳ ನಂಟು ಇದ್ದು, ಈಗ 4ನೇ ಶಾಖೆ ಉದ್ಘಾಟನೆಗೊಂಡಿದೆ. ಈ ಹೊಸ ಶಾಖೆಯಲ್ಲಿ ಲಾಕರ್, ಎಟಿಎಂ ಮತ್ತು ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸಲಾಗಿದೆ. ಬ್ಯಾಂಕ್ ಮೆಡಿಕಲ್ ಕಾಲೇಜಿನ ಕೇಂದ್ರ ಸ್ಥಳದಲ್ಲಿದ್ದು, ಗ್ರಾಹಕರಿಗೆ ಹೆಚ್ಚು ಅನುಕೂಲವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ವೇದಿಕೆಯಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎಂ. ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ.ಸಜ್ಜನ (ಬೇವೂರ) ಇದ್ದರು. ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಸದಸ್ಯರು, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್ ಸೀನಿಯರ್ ರೀಜಿನಲ್ ಮ್ಯಾನೇಜರ್ ನಿಧೀರ ಕಾಂತ, ಸೀನಿಯರ್ ಮ್ಯಾನೇಜರ್ ಪ್ರವೀಣ ಪಾಠಕ್, ಸೀನಿಯರ್ ಬ್ರ್ಯಾಂಚ್ ಮ್ಯಾನೇಜರ್ ಮಹಾಂತೇಶ ತಾವಧಾರೆ, ಮೆಡಿಕಲ್ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ಶಿವಕುಮಾರ ಸೊಲಬನ್ನವರ್‌, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ ಮತ್ತು ಮೆಡಿಕಲ್ ಕಾಲೇಜಿನ ಸಿಬ್ಬಂದಿ ಇದ್ದರು. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬ್ಯಾಂಕಿನ ಗ್ರಾಹಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರ ಮೂಲಕ ಬ್ಯಾಂಕ್‌ಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ. ವಿದ್ಯಾರ್ಥಿಗಳನ್ನು ಸಮಾಜದ ಮುನ್ನೆಲೆಗೆ ತರುತ್ತಿರುವ ಬ್ಯಾಂಕ್‌ಗಳ ಕಾರ್ಯ ಶ್ಲಾಘನೀಯ.

ಡಾ.ವೀರಣ್ಣ.ಚರಂತಿಮಠ, ಮಾಜಿ ಶಾಸಕ