ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

| Published : Mar 19 2024, 12:50 AM IST

ಸನಾತನ ಸಂಸ್ಕೃತಿಗೆ ಬ್ರಾಹ್ಮಣರ ಕೊಡುಗೆ ಅಪಾರ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆ ಹಮ್ಮಿಕೊಳ್ಳಲಾಗಿತ್ತು.

ಬ್ರಾಹ್ಮಣ ವಾರ್ಷಿಕ ಮಹಾಸಭೆಬೇಲೂರು: ನಮ್ಮ ದೇಶದ ಸಂಸ್ಕೃತಿ, ಧಾರ್ಮಿಕ ಪರಂಪರೆ ಉಳಿಸುವಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಹೇಳಿದರು. ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ರಾಜ ಮಹಾರಾಜರ ಕಾಲದಲ್ಲಿ ರಾಜಗುರುವಾಗಿ ಮಾರ್ಗದರ್ಶನ ನೀಡುತ್ತ ಉತ್ತಮ ಆಡಳಿತ ನಡೆಸುವಲ್ಲಿ ಅವರ ಸೇವೆ ಅವಿಸ್ಮರಣೀಯ. ಪುರಾತನ ಸಂಸ್ಕೃತಿ, ಧಾರ್ಮಿಕತೆಗೆ ಹೆಸರಾಗಿರುವ ಭಾರತ ದೇಶ ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯದತ್ತ ವಾಲುತ್ತಿರುವುದು ವಿಷಾದನೀಯ. ಬ್ರಾಹ್ಮಣ ಸಮಾಜ ಸಂಸ್ಕೃತಿ, ಧಾರ್ಮಿಕ ಪರಂಪರೆ ಉಳಿಸುವಲ್ಲಿ ಸಾಕಷ್ಟು ಪ್ರಯತ್ನ ಪಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

‘ಅವಿಭಕ್ತ ಕುಟುಂಬಗಳು ಇದ್ದಾಗ ಮನೆಯವರ ನಡುವೆ ಪ್ರೀತಿ, ವಾತ್ಸಲ್ಯ, ಸಂಸ್ಕೃತಿ, ವಿಚಾರಧಾರೆಗಳು ಮಕ್ಕಳ ವ್ಯಕ್ತಿತ್ವವನ್ನು ರೂಪಿಸಲು ಸಹಾಯ ಮಾಡುತ್ತಿದ್ದವು. ಆದರೆ ಇತ್ತೀಚೆಗೆ ಮೊಬೈಲ್ ಹಾವಳಿಯಿಂದ ಕುಟುಂಬದಲ್ಲಿ ಪ್ರೀತಿ ವಿಶ್ವಾಸಗಳು ಕಡಿಮೆಯಾಗಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಆಧುನಿಕತೆ ಮಧ್ಯೆ ನಮ್ಮ ಪುರಾತನ ಸಂಸ್ಕೃತಿ ಆಚರಣೆಗಳನ್ನು ಮೈಗೂಡಿಸಿಕೊಳ್ಳಬೇಕು. ತಂತ್ರಜ್ಞಾನದಲ್ಲಿ ಮುನ್ನುಗ್ಗುತ್ತಿರುವ ಭಾರತ ದೇಶವು ವಿಶ್ವ ಗುರುವಾಗಿ ಹೊರಹೊಮ್ಮಿದೆ. 140 ಕೋಟಿ ಜನಸಂಖ್ಯೆ ಇರುವ ಭಾರತ ದೇಶ ಈಗ ಇಡೀ ವಿಶ್ವವೇ ತಿರುಗಿ ನೋಡುವಂತಾಗಿದೆ. ನಮ್ಮ ಸಮಾಜದ ಮೇಲೆ ನಮಗೆ ಹೆಮ್ಮೆ, ಅಭಿಮಾನ ಇರಬೇಕು. ಸಮಾಜದಲ್ಲಿ ಎಲೆಮರೆ ಕಾಯುತ್ತಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ನಡೆಯಬೇಕು. ಜೀವನದಲ್ಲಿ ಮುಂದೆ ಗುರಿ ಹಿಂದೆ ಗುರು ಇದ್ದಾಗ ಮಾತ್ರ ಯಶಸ್ಸು ಸಾಧ್ಯ ಎಂದರು.

ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಿ.ಆರ್. ವಿಜಯ್ ಕೇಶವ್, ವಿಪ್ರ ಮಹಿಳಾ ಒಕ್ಕೂಟ ಅಧ್ಯಕ್ಷ ಶ್ರೀವಿದ್ಯಾ ಶ್ರೀಹರಿ, ಚನ್ನಕೇಶವ ದೇಗುಲ ಆಗಮಿಕ ಶ್ರೀನಿವಾಸ್, ಜಿಲ್ಲಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷರಾದ ಕೆ.ಆರ್. ಮಂಜುನಾಥ್ ತೊ.ಚ ಅನಂತ ಸುಬ್ಬರಾಯ, ತೊ.ಚ ನರಸಿಂಹಮೂರ್ತಿ, ಅನಂತಮೂರ್ತಿ, ರಘೋತ್ತಮ, ಚೈತನ್ಯ, ಕೋಟೆ ಶ್ರೀನಿವಾಸ್, ಶ್ರೀನಿಧಿ, ಶ್ರೀವತ್ಸ, ರಾಘವೇಂದ್ರ ಹೊಳ್ಳ, ಅಮಿತ್ ಶೆಟ್ಟಿ ಇದ್ದರು.

ಬೇಲೂರು ತಾಲೂಕು ಬ್ರಾಹ್ಮಣ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದರು.