ಸಾರಾಂಶ
ಸಮಾಜದ ಅಭಿವೃದ್ದಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದೆ. ಗುರುವಿನ ಉಪದೇಶದೊಂದಿಗೆ ಆಧುನಿಕತೆಯ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳು ಜ್ಞಾನಾರ್ಜನೆ ಪಡೆಯಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಸಮಾಜದ ಅಭಿವೃದ್ದಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದೆ. ಗುರುವಿನ ಉಪದೇಶದೊಂದಿಗೆ ಆಧುನಿಕತೆಯ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳು ಜ್ಞಾನಾರ್ಜನೆ ಪಡೆಯಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.ಪಟ್ಟಣದ ವಿಶ್ವರಾಜ ಸಭಾಭವನದಲ್ಲಿ ಗುರುವಾರ ಡಾ, ಸರ್ವಪಲ್ಲಿ ರಾಧಾಕೃಷ್ಣನ್ ಅವರ 136 ನೇ ಜನ್ಮ ದಿನದ ನಿಮಿತ್ತ ಶಿಕ್ಷಕರ ದಿನಾಚಾರಣೆ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಮಾತನಾಡಿ, ಅಂದಿನ ಗುರುಕುಲ ಮತ್ತು ಇಂದಿನ ಸರ್ಕಾರದ ಶಿಕ್ಷಣದ ಅವಲೋಕನ ಮುಖ್ಯವಾಗಿದೆ. ಸರ್ಕಾರದ ಶಿಕ್ಷಣ ನೀತಿಗಳ ಕಡಿವಾಣದಿಂದ ಮಕ್ಕಳಿಗೆ ನೈತಿಕತೆ ಶಿಕ್ಷಣ ಸಿಗುತ್ತಿಲ್ಲ. ಶಿಕ್ಷಣದ ಮೇಲೆ ಹೇರುತ್ತಿರುವ ನಿರ್ಬಂಧನೆಗಳನ್ನು ತೆಗೆಯಬೇಕು. ಸರ್ಕಾರ ಹಾಗೂ ಪಾಲಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಯುವಪೀಳಿಗೆ ದೊಡ್ಡ ಸವಾಲು ಎದುರಿಸಬೇಕಾಗುತ್ತದೆ ಎಂದರು.ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಉಪನ್ಯಾಸ ನೀಡಿದರು.
ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಕ್ಯಾರಗುಡ್ಡದ ಅಭಿನವ ಮಂಜುನಾಥ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ತಹಶೀಲ್ದಾರ್ ಮಂಜುಳಾ ನಾಯಕ, ತಾಪಂ ಇಒ ಟಿ. ಆರ್. ಮಲ್ಲಾಡದ, ಅಕ್ಷರ ದಾಸೋಹ ಸಹಾಯಕ ನಿರ್ದೆಶಕಿ ಸವಿತಾ ಹಲಕಿ, ಕ್ಷೇತ್ರ ಸಮನ್ವಯಾಧಿಕಾರಿ ಎ.ಎಸ್. ಪದ್ಮಣ್ಣವರ, ಎ.ಐ. ಕೋಟಿವಾಲೆ ಮತ್ತಿತರರು ಉಪಸ್ಥಿತರಿದ್ದರು
ಆದರ್ಶ ಶಿಕ್ಷಕ, ನಿವೃತ್ತಿ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಕ್ಷೇತ್ರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತಾಲೂಕಿನ ವಿವಿಧ ಶಾಲಾ ಶಿಕ್ಷಕರು, ಶಿಕ್ಷಕಿಯರು ಉಪಸ್ಥಿತರಿದ್ದರು.ಮುಖ್ಯಶಿಕ್ಷಕ ಶಿವಾನಂದ ಗುಂಡಾಳಿ ಕಾರ್ಯಕ್ರಮ ನಿರೂಪಿಸಿದರು. ಅನಿಲ ಹಂಜಿ ವಂದಿಸಿದರು.