ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ: ದರ್ಶನಾಪುರ

| Published : Sep 11 2024, 01:05 AM IST

ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ: ದರ್ಶನಾಪುರ
Share this Article
  • FB
  • TW
  • Linkdin
  • Email

ಸಾರಾಂಶ

Contribution of teachers to building a strong country is immense: Darshanapura

-ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ । ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಸಚಿವ ದರ್ಶನಾಪುರ

-------

ಕನ್ನಡಪ್ರಭ ವಾರ್ತೆ ಯಾದಗಿರಿ

ಶಿಕ್ಷಕರು ಮಕ್ಕಳ ಉತ್ತಮ ಶಿಕ್ಷಣಕ್ಕೆ ಶ್ರಮಿಸಿ ಜಿಲ್ಲೆಗೆ ಹೆಚ್ಚಿನ ಫಲಿತಾಂಶ ತರುವಲ್ಲಿ ಕಾರ್ಯ ನಿರ್ವಹಿಸಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಬಡ ಮಕ್ಕಳೇ ಬರುತ್ತಾರೆ. ಆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎತ್ತರಕ್ಕೆ ತರುವ ಬೆಳೆಸುವ ಕೆಲಸ ನಿಮ್ಮದಾಗಬೇಕು. ಮೌಲ್ಯಯುತ ಬದುಕಿಗೆ ಶಿಕ್ಷಣ ಮುಖ್ಯ. ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ವಿಶೇಷ ಸ್ಥಾನ ಸಿಕ್ಕಿದ್ದು, ಇದರಿಂದ ಈ ಭಾಗದ ಜನರಿಗೆ ಸರ್ಕಾರಗಳ ಯೋಜನೆಗಳು, ಶಿಕ್ಷಣಕ್ಕಾಗಿ ವಿಶೇಷ ಸೌಲಭ್ಯಗಳು, ಇನ್ನಿತರ ಅವಕಾಶಗಳು ಸಿಕ್ಕಿದ್ದು, ಅವುಗಳ ಸದ್ಬಳಕೆ ಆಗಬೇಕು ಎಂದರು.

ವಿಧಾನ ಪರಿಷತ್ತು ಶಾಸಕ ಚಂದ್ರಶೇಖರ ಬಿ. ಪಾಟೀಲ್ ಮಾತನಾಡಿ, ಸರ್ಕಾರಿ ನೌಕರರಿಗೆ ಇರುವ ಪಿಂಚಣಿ ವ್ಯವಸ್ಥೆಯ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರು ರಾಜ್ಯ ಪ್ರಶಸ್ತಿ ಪುರಸ್ಕೃತ ಹುಣಸಗಿ ತಾಲೂಕಿನ ಬಸ್ಸಾಪುರ ಶಾಲೆಯ ಶಿಕ್ಷಕ ನೀಲಪ್ಪ ತೆಗ್ಗಿ, ಕಿರಿಯ ಪ್ರಾಥಮಿಕ ವಿಭಾಗದ ಹತ್ತಿಗೂಡೂರು ಡಾ. ಅಂಬೇಡ್ಕರ ನಗರ ಶಾಲೆಯ ಸಹ ಶಿಕ್ಷಕಿ ಮೀನಾಕ್ಷಿ, ಸುರಪುರ ಕುರುಬರ ಗಲ್ಲಿ ಶಾಲೆಯ ಶಿಕ್ಷಕಿ ಸುಜಾತ ನಾಯ್ಕ, ಸುರಪುರ ಮಂಡೇಲಮ್ಮನ ಗುಡಿ ಶಾಲೆಯ ಶಿಕ್ಷಕಿ ನೀಲಮ್ಮ ಹಾವೇರಿ, ಯಾದಗಿರಿಯ ಬಂಗಾರೆಮ್ಮನ ಗುಡಿ ಶಾಲೆಯ ಶಿಕ್ಷಕಿ ಸುಮಂಗಲಾ. ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಹಾಪುರದ ಹೊಸೂರು ಶಾಲೆಯ ಶಿಕ್ಷಕ ಪರಸಪ್ಪ ಅಜಗಪ್ಪನವರ, ಸುರಪುರದ ಕನಗಂಡನಹಳ್ಳಿ ಶಾಲೆಯ ಶಿಕ್ಷಕಿ ಗೀತಾ ಸಜ್ಜನ್, ಯಾದಗಿರಿಯ ಉರ್ದು ಶಾಲೆಯ ಶಿಕ್ಷಕ ಉಷ್ತಾಕ ಅಹ್ಮದ್. ಪ್ರೌಢಶಾಲಾ ವಿಭಾಗದ ಶಹಾಪುರಿನ ದೋರನಹಳ್ಳಿ ಶಾಲೆಯ ಶಿಕ್ಷಕಿ ಸಂಗೀತಾ ದೇಸಾಯಿ, ಸುರಪುರ ಆರ್ ಎಂ.ಎಸ್.ಎ ದೇವಿಕೇರಾ ಶಾಲೆಯ ಶಿಕ್ಷಕ ತಿಪ್ಪೇಸ್ವಾಮಿ, ರಾಮಸಮುದ್ರ ಪ್ರೌಢಶಾಲೆಯ ಶಿಕ್ಷಕ ರಾಜಶೇಖರ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್,ರಾಜ್ಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಡಿಡಿಪಿಐ ಮಂಜುನಾಥ, ಯಾದಗಿರಿ ಬಿಇಒ ಚಂದ್ರಶೇಖರಗೌಡ ಪಾಟೀಲ್, ಬಿಆರ್‌ಸಿ ಮಲ್ಲಿಕಾರ್ಜುನ ಪೂಜಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಕೆಂಭಾವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಯಾದಗಿರಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಗೌಡ ಬಿ., ಯಾದಗಿರಿ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಯಂಕಪ್ಪ ದೊಡ್ಮನಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಹೊಸಮನಿ, ಬೋಧಕೇತರ ನೌಕರರ ಸಂಘದ ಜಿಲ್ಲಾಧ್ಯಕ್ಷ ಆದೆಪ್ಪ ಬಾಗ್ಲಿ, ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಸಂಜೀವಿನಿ, ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ, ಶಿಕ್ಷಣ ಸಂಯೋಜಕರಾದ ಮಲ್ಲಿಕಾರ್ಜುನ ಕಾವಲಿ ಇದ್ದರು.

----

10ವೈಡಿಆರ್12: ಯಾದಗಿರಿ ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ ಉದ್ಘಾಟಿಸಿದರು.

----

10ವೈಡಿಆರ್13: ಯಾದಗಿರಿ ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.

----

10ವೈಡಿಆರ್14 : ಯಾದಗಿರಿ ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.