ಸಾರಾಂಶ
Control Christmas Celebration At School Says Hindu Parishad
ಹಿರಿಯೂರು: ಶಾಲಾ ಮಟ್ಟದಲ್ಲಿ ಕ್ರಿಸ್‌ಮಸ್ ಆಚರಣೆ ತಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕ್ರಿಸ್‌ಮಸ್ ಆಚರಣೆ ಕಂಡು ಬಂದಿದೆ. ಈ ವೇಳೆ ಶಾಲಾ ಆಡಳಿತ ಮಂಡಳಿಯವರು ಎಲ್ಲಾ ಮಕ್ಕಳಿಗೂ ಸಾಂತಾಕ್ಲಾಸ್ ವೇಷ ಧರಿಸುವಂತೆ ಒತ್ತಡ ಹೇರುವುದು ಕಂಡು ಬಂದಿದೆ. ಈ ಬಗ್ಗೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ಮಕ್ಕಳು ಹೆಚ್ಚಿರುವ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆ ಮಾಡುವುದು ಒಂದು ರೀತಿ ಮತಪ್ರಚಾರ. ಅನ್ಯ ಧರ್ಮಿಯರ ಆಚರಣೆ ನಮ್ಮ ಮಕ್ಕಳ ಮೇಲೆ ಹೇರುತ್ತಿರುವುದು ಖಂಡನೀಯ. ಈ ರೀತಿ ಆಚರಣೆ ಸಾಮೂಹಿಕವಾಗಿ ಆಚರಿಸದಂತೆ ಸುತ್ತೋಲೆ ಹೊರಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದರು.ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಮಸ್ಕಲ್, ತಾಲೂಕು ಕಾರ್ಯದರ್ಶಿ ವೆಂಕಟೇಶ್, ಗೋವರ್ಧನ್, ವಿಶ್ವನಾಥ್, ಹರೀಶ್, ಪ್ರಭಾಕರ್, ಚೇತನ್, ಶ್ರೀಧರ್ ಮುಂತಾದವರು ಹಾಜರಿದ್ದರು.
--------------1&2
ಕ್ರಿಸ್‌ಮಸ್ ಆಚರಣೆ ಎಲ್ಲಾ ಮಕ್ಕಳ ಮೇಲೆ ಹೇರಬಾರದು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ತಾಲೂಕು ಘಟಕದಿಂದ ಬಿಇಒ ಸಿಎಂ ತಿಪ್ಪೇಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.